ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 ಮಾರ್ಚ್ 2022
ವೈದ್ಯೆಯೊಬ್ಬರು ಸಾಗರದ ಗಣಪತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿದೆ.
ಡಾ.ಶರ್ಮದಾ (36) ಅವರು ಕೆರೆಗೆ ಹಾರಿದವರು. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಗಣಪತಿ ಕೆರೆ ಬಳಿ ಬಂದ ಡಾ.ಶರ್ಮದಾ, ಸ್ಕೂಟಿ ನಿಲ್ಲಿಸಿ, ಚಪ್ಪಲಿಯನ್ನು ಕೆರೆ ದಂಡೆ ಬಿಟ್ಟು ಹಾರಿದ್ದಾರೆ ಎಂದು ತಿಳಿದು ಬಂದಿದೆ.
ಡಾ.ಶರ್ಮದಾ ಅವರು ಕೆರೆಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು ಅವರ ರಕ್ಷಣೆ ಮಾಡಿದ್ದಾರೆ. ಈ ಸಂದರ್ಭ ಅವರು ಉಸಿರಾಡುತ್ತಿದ್ದರು ಎಂದು ತಿಳಿದು ಬಂದಿದೆ. ವೈದ್ಯೆಯನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು?
ಡಾ.ಶರ್ಮದಾ ಅವರು ತಾಲೂಕು ವೈದ್ಯಾಧಿಕಾರಿ ಕಚೇರಿಯ ಬಾಲ ಸ್ವಾಸ್ಥ್ಯ ಯೋಜನೆ ಅಡಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಪತಿ ಸುನೀಲ್ ಅವರು ಭೀಮನಕೋಣೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿದ್ದಾರೆ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಡಾ.ಶರ್ಮದಾ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕೋವಿಡ್ ಸಂದರ್ಭ ಪ್ರಶಂಸೆ
ಡಾ.ಶರ್ಮದಾ ಅವರು ಆಯುರ್ವೇದ ತಜ್ಞರಾಗಿದ್ದರು. ಕೋವಿಡ್ ಸಂದರ್ಭ ಇವರ ಸೇವೆ ಪ್ರಶಂಸೆಗೆ ಪಾತ್ರವಾಗಿತ್ತು. ಲಸಿಕೆ ನೀಡುವ ವೇಳೆಯು ಇವರ ಕರ್ತವ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಇನ್ನು, ಡಾ.ಶರ್ಮದಾ ಅವರು ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಇವರ ಸಾವಿನ ಕುರಿತು ಸಮಗ್ರ ತನಿಕೆ ಆಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















