ಶಿವಮೊಗ್ಗ ಲೈವ್.ಕಾಂ | SAGARA NEWS | 14 ಆಗಸ್ಟ್ 2020
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಸರ್ಕಾರ ತನ್ನ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಸಾಗರದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು ನೇತೃತ್ವದಲ್ಲಿ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ದೇವಸ್ಥಾನಕ್ಕೆ ಅಪಾರ ಪ್ರಮಾಣದಲ್ಲಿ ಕಾಣಿಕೆ ಹಣ ಬರುತ್ತಿದೆ. ಈ ಹಣ ದುರುಪಯೋಗ ಆಗಿದೆ. ದೇವಸ್ಥಾನದ ಕಟ್ಟಡಗಳೆಲ್ಲ ಶರಾವತಿ ಅಭಯಾರಣ್ಯ ವ್ಯಾಪ್ತಿಯಲ್ಲಿದೆ. ಕಂದಾಯ ಇಲಾಖೆ ಅಧಿಕಾರಿಗಳು ನೊಟೀಸ್ ನೀಡಿ ಸುಮ್ಮನಾಗಿದ್ದಾರೆ ಎಂದು ಆರೋಪಿಸಿದರು.
ಕಂದಾಯ ಇಲಾಖೆ ಸ್ಥಳ ಪರಿಶೀಲನೆ ನಡೆಸಬೇಕು. ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸಿ ಆಡಳಿತಾಧಿಕಾರಿ ನೇಮಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಅಣ್ಣಪ್ಪ ಬಾಳೆಗುಂಡಿ, ಧರ್ಮಪ್ಪ, ಎ.ಎ.ಶೇಕ್, ಕೃಷ್ಣಪ್ಪ, ಅರವಿಂದ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]