ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 MAY 2024
SAGARA : ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಗೀತಾ ಶಿವರಾಜ್ ಕುಮಾರ್ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ ಪ್ರಶ್ನೆ ಎಂದು ನಟ ದುನಿಯಾ ವಿಜಯ್ ಹೇಳಿದರು.
ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ರಾಮದಲ್ಲಿ ಅನ್ಯ ಪಕ್ಷಗಳಿಗೆ ಬೆಂಬಲಿಸುವ ಯುವಕ- ಯುವತಿಯರು ಇರಬಹುದು. ನಮಗೆ ನಿಮ್ಮ ಪಕ್ಷದ ಕುರಿತ ಗೌರವ ಇದೆ. ಆದರೆ, ಹೆಚ್ಚಾಗಿ ಇಲ್ಲಿ ರೈತ ಕುಟುಂಬಗಳು ವಾಸವಾಗಿವೆ. 30 ವರ್ಷದ ಹಿಂದೆ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಿದ್ದ ಬಂಗಾರಪ್ಪ ಅವರ ಸೇವೆಯನ್ನು ಮರೆಯಕೂಡದು ಎಂದರು.
‘ಬದಲಾವಣೆಗೆ ಅವಕಾಶ ಕಲ್ಪಿಸಿಕೊಡಿ’
ಚಿತ್ರನಟ ಶಿವರಾಜ್ ಕುಮಾರ್ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಪತ್ನಿ ಗೀತಾಗೆ, ಕ್ಷೇತ್ರದ ಅಂತರಾಳದ ಅರಿವಿದೆ. ಗೀತಾ ಅವರು, ಬಂಗಾರಪ್ಪ ಅವರ ಮಗಳಾಗಿ, ಇದೇ ಮಣ್ಣಿನಲ್ಲಿ ಆಡಿ ಬೆಳೆದಿದ್ದಾರೆ. ಕ್ಷೇತ್ರದ ಹಿತಕಾಪಾಡಲು ಒಂದು ಅವಕಾಶ ಕಲ್ಪಿಸಿಕೊಡಿ ಎಂದರು.
ಇದನ್ನೂ ಓದಿ – ನಾಳೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ, ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ ಸಿನಿಮಾ ಸ್ಟಾರ್ಗಳು, ಎಲ್ಲಿ ನಡೆಯುತ್ತೆ ಪ್ರೊಗ್ರಾಂ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422