ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 SEPTEMBER 2023
SAGARA : ಹಳಿ ಮೇಲೆ ವಿದ್ಯುತ್ ಕಂಬಿ ತುಂಡಾಗಿ ಬಿದ್ದಿದ್ದರಿಂದ ಕೆಲಕಾಲ ರೈಲು (Trains) ಸಂಚಾರ ವ್ಯತ್ಯಯವಾಗಿತ್ತು. ಕೂಡಲೆ ರೈಲ್ವೆ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ತಾಂತ್ರಿಕ ಸಮಸ್ಯೆ ಪರಿಹರಿಸಿದ್ದಾರೆ.
ಆನಂದಪುರ ಸಮೀಪ ರೈಲ್ವೆ ಹಳಿ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ತಾಳಗುಪ್ಪ – ಬೆಂಗಳೂರು ಇಂಟರ್ಸಿಟಿ ರೈಲು (Inter City) ಸಿಬ್ಬಂದಿ ಇದನ್ನು ಗಮನಿಸಿ ನಿಲ್ದಾಣಕ್ಕೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ – KSRTC ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದಾಗ ಮಹಿಳೆ, ಪತಿಗೆ ಕಾದಿತ್ತು ಶಾಕ್
ಎರಡೂವರೆ ಗಂಟೆ ತಡ
ಬೆಳಗ್ಗೆ 5.15ಕ್ಕೆ ತಾಳಗುಪ್ಪದಿಂದ ಹೊರಟಿದ್ದ ಬೆಂಗಳೂರು ಇಂಟರ್ಸಿಟಿ (ರೈಲು ಸಂಖ್ಯೆ 20652) ಬೆಳಗ್ಗೆ 6.05ಕ್ಕೆ ಆನಂದಪುರಕ್ಕೆ ತಲುಪಿದ್ದು, ಅಲ್ಲಿಯೇ ನಿಂತಿತ್ತು. ಹಳಿ ಮೇಲೆ ಬಿದ್ದಿದ ವಿದ್ಯುತ್ ತಂತಿ ತೆರವುಗೊಳಿಸಿ ರಿಪೇರಿ ಕಾರ್ಯ ನಡೆಸಲಾಯಿತು. ಎರಡೂವರೆಗೆ ಗಂಟೆ ಬಳಿಕ 8.39ಕ್ಕೆ ರೈಲು (Trains) ಸಂಚಾರ ಆರಂಭಿಸಿದೆ. 7 ಗಂಟೆಗೆ ಶಿವಮೊಗ್ಗ ನಿಲ್ದಾಣ ತಲುಪಬೇಕಿದ್ದ ರೈಲು 10 ಗಂಟೆ ಹೊತ್ತಿಗೆ ತಲುಪಿದೆ.
ತಾಳಗುಪ್ಪದವರೆಗೆ ರೈಲ್ವೆ ಲೇನ್ ವಿದ್ಯುದೀಕರಣ ಕಾಮಗಾರಿ ನಡೆಸಲಾಗುತ್ತಿದೆ. ಇದರ ವಯರ್ ತುಂಡಾಗಿ ರೈಲ್ವೆ ಲೇನ್ ಮೇಲೆ ಬಿದ್ದಿತ್ತು ಎಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ಇಲಾಖೆ ಸಿಬ್ಬಂದಿ ರಿಪೇರಿ ಕಾರ್ಯ ಕೈಗೊಂಡು ರೈಲುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
LATEST NEWS
- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

About The Editor
ನಿತಿನ್ ಆರ್.ಕೈದೊಟ್ಲು






