ಶಿವಮೊಗ್ಗ ಲೈವ್.ಕಾಂ |SAGARA NEWS | 9 NOVEMBER 2020
ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸಾಗರ ನಗರಸಭೆ ಮುಂದುವರೆಸಿದೆ. ಅಣಲೆಕೊಪ್ಪದಲ್ಲಿ ಸುಮಾರು ಒಂದು ಎಕರೆ ಜಾಗದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.
ಅಣಲೆಕೊಪ್ಪದ ಸರ್ವೆ ನಂಬರ್ 8ರಲ್ಲಿ ಸುಮಾರು ಒಂದು ಎಕರೆಯಷ್ಟು ಕಂದಾಯ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ಇಲ್ಲಿ ನಿರ್ಮಿಸಿದ್ದ ಶೆಡ್ಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.
ತೆರವು ಕಾರ್ಯಾಚರಣೆ ಬಳಿಕ ಆ ಜಾಗದಲ್ಲಿ ನಗರಸಭೆಗೆ ಕಾಯ್ದಿರಿಸಿದ ಜಾಗ ಎಂದು ಬೋರ್ಡ್ ಹಾಕಲಾಯಿತು. ಕೆಲವು ತಿಂಗಳಿಂದ ಇದೆ ಮಾದರಿಯಲ್ಲಿ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪೌರಾಯುಕ್ತ ಹೆಚ್.ಕೆ.ನಾಗಪ್ಪ ನೇತೃತ್ವದಲ್ಲಿ ಕಂದಾಯ ಅಧಿಕಾರಿ ಸಂತೋಷ್ ಕುಮಾರ್, ಕಂದಾಯ ವಿಭಾಗದ ಮಂಜುನಾಥ ಗೌಡ, ಹರೀಶ್, ಶ್ರೀನಿವಾಸ್, ಮಂಜುನಾಥ್ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]