ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 ಮಾರ್ಚ್ 2022
ಸಾಗರದ ಗಣಪತಿ ಕೆರೆಯಲ್ಲಿ ಈ ವರ್ಷವು ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಇವುಗಳ ಚಲನವಲನ, ಚಿನ್ನಾಟವನ್ನು ಕಣ್ತುಂಬಿಕೊಳ್ಳಲು, ಕ್ಯಾಮರಾ, ಮೊಬೈಲ್‍ನಲ್ಲಿ ಸೆರೆ ಹಿಡಿಯಲು ಹಲವರು ಕೆರೆ ಬಳಿಗೆ ಬರುತ್ತಿದ್ದಾರೆ.
ಕಳೆದ ಕೆಲವು ದಿನದಿಂದ ನೀರು ನಾಯಿಗಳು ದೊಡ್ಡ ಸಂಖ್ಯೆಯಲ್ಲಿ ಗಣಪತಿ ಕೆರೆಯಲ್ಲಿ ಕಾಣಿಸಿಕೊಂಡಿವೆ. ಸುಮಾರು 50 ನೀರು ನಾಯಿಗಳು ಬಂದಿವೆ.
ಶರವಾತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ ಪಟ್ಟಣದ ಗಣಪತಿ ಕೆರೆಗೆ ನೀರು ನಾಯಿಗಳು ಬಂದಿರುವ ಸಾದ್ಯತೆ ಇದೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ ಆಗಿರುವುದರಿಂದ ಇವುಗಳಿಗೆ ಹಾನಿ ಮಾಡಿದರೆ ಅರಣ್ಯ ಇಲಾಖೆ ಕೇಸ್ ದಾಖಲು ಮಾಡುತ್ತದೆ.
ಮೀನುಗಳು ಗುಳುಂ ಸ್ವಾಹ
ಗಣಪತಿ ಕೆರೆಯಲ್ಲಿ ಮೀನುಗಾರಿಕೆ ಗುತ್ತಿಗೆ ಪಡೆದವರಿಗೆ ನೀರು ನಾಯಿಗಳು ಭಾರಿ ಸಂಕಷ್ಟ ತಂದೊಡ್ಡಿವೆ. ಗೆಂಡೆ, ಕಾಟ್ಲಾ, ಗೌರಿ, ಮೃಗಾಲ, ಸೇರಿ ವಿವಿಧ ಜಾತಿಯ ಮೀನುಗಳನ್ನು ಕೆರೆಯಲ್ಲಿ ಬಿಡಲಾಗಿದೆ. ಆದರೆ ನೀರು ನಾಯಿಗಳ ಗುಂಪು ಪ್ರತಿದಿನ ನೂರಾರು ಮೀನುಗಳನ್ನು ಹಿಡಿದು ತಿನ್ನುತ್ತಿವೆ.
ಮೀನುಗಾರರ ಸಹಕಾರ ಸಂಘದವರು ಕೆರೆಯಲ್ಲಿ ಮೀನುಗಾರಿಕೆ ಗುತ್ತಿಗೆ ಪಡೆದಿದ್ದಾರೆ. ಈ ಕುರಿತು ಮಾತನಾಡಿದ ಮೀನುಗಾರರಾದ ಭೈರಪ್ಪ, ‘ಕೆರೆ ಸ್ವಚ್ಚವಾಗಿದೆ. ನೀರು ನಾಯಿಗಳಿಗೆ ಮೀನು ಸುಲಭವಾಗಿ ಕಾಣಿಸುತ್ತವೆ. ಪ್ರತಿದಿನ ನೀರು ನಾಯಿಗಳು ಅವುಗಳನ್ನು ಹಿಡಿದು ತಿನ್ನುತ್ತಿವೆ. ನಾವು ಬಲೆ ಹಾಕಿದರೆ ಬೆರಳೆಣಿಕೆಯಷ್ಟು ಮೀನುಗಳು ಮಾತ್ರ ಸಿಗುತ್ತಿವೆ. ಬಲೆಯನ್ನೂ ಕಡಿದು ಮೀನು ಹಿಡಿದುಕೊಂಡು ಹೋಗುತ್ತಿವೆ’ ಅನ್ನುತ್ತಾರೆ.
ನೀರು ನಾಯಿಗಳ ಗುಂಪು ಹೆಚ್ಚು ಸಮಯ ಒಂದೆ ಕಡೆ ಇರುವುದಿಲ್ಲ. ಒಂದೆಡೆಯಿಂದ ಮತ್ತೊಂದು ಕಡೆಗೆ ತೆರಳುತ್ತಿರುತ್ತವೆ. ಸದಾ ಗುಂಪಿನಲ್ಲಿ ಕಾಣಿಸಿಕೊಳ್ಳುತ್ತವೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422