| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021
ಅಬಕಾರಿ ಇಲಾಖೆ ಅಧಿಕಾರಿಗಳು ಇವತ್ತು ಮೂರು ಕಡೆ ದಾಳಿ ನಡೆಸಿದ್ದಾರೆ. ಕಳ್ಳಬಟ್ಟಿ ಮತ್ತು ಅದನ್ನು ತಯಾರಿಸಲು ಇರಿಸಿದ್ದ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ.
ಎಲ್ಲೆಲ್ಲಿ ದಾಳಿ ಮಾಡಲಾಗಿದೆ?
ದಾಳಿ 1 – ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲೂರು ಗ್ರಾಮದ ಬಲವೀಂದ್ರಪ್ಪ ಎಂಬುವವರ ಮನೆ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯ ಹಿಂಬದಿಯಲ್ಲಿ ಕಳ್ಳಬಟ್ಟಿ ತಯಾರಿಗೆ ಸಂಗ್ರಹಿಸಿ ಇಟ್ಟಿದ್ದ 110 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ.
ದಾಳಿ 2 – ಪ್ರವೀಣ್ ಎಂಬಾತನ ಮನೆ ಮೇಲೆ ದಾಳಿ ನಡೆಸಿದ್ದು, 20 ಲೀಟರ್ ಬೆಲ್ಲದ ಕೊಳೆ ಮತ್ತು 20 ಲೀಟರ್ ಕಳ್ಳಬಟ್ಟಿ ಸಾರಾಯಿ ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ. ಎರಡು ಪ್ರಕರಣದಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಅಬಕಾರಿ ಇಲಾಖೆ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಸಾಗರ ಉಪ ವಿಭಾಗದ ಸಿಬ್ಬಂದಿಗಳು, ಸೊರಬ ವಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ದಾಳಿ 3 – ಸುಳ್ಳೂರು ಗ್ರಾಮದ ಧರ್ಮಪ್ಪ ಎಂಬುವವರ ಮನೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. 80 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()