ಅಬಕಾರಿ ಇಲಾಖೆ ಅಧಿಕಾರಿಗಳಿಂದ ಮೂರು ಕಡೆ ದಾಳಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021
➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಅಬಕಾರಿ ಇಲಾಖೆ ಅಧಿಕಾರಿಗಳು ಇವತ್ತು ಮೂರು ಕಡೆ ದಾಳಿ ನಡೆಸಿದ್ದಾರೆ. ಕಳ್ಳಬಟ್ಟಿ ಮತ್ತು ಅದನ್ನು ತಯಾರಿಸಲು ಇರಿಸಿದ್ದ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ.

ಎಲ್ಲೆಲ್ಲಿ ದಾಳಿ ಮಾಡಲಾಗಿದೆ?

ದಾಳಿ 1 – ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲೂರು ಗ್ರಾಮದ ಬಲವೀಂದ್ರಪ್ಪ  ಎಂಬುವವರ ಮನೆ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯ ಹಿಂಬದಿಯಲ್ಲಿ ಕಳ್ಳಬಟ್ಟಿ ತಯಾರಿಗೆ ಸಂಗ್ರಹಿಸಿ ಇಟ್ಟಿದ್ದ 110 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ.

ದಾಳಿ 2 – ಪ್ರವೀಣ್ ಎಂಬಾತನ ಮನೆ ಮೇಲೆ ದಾಳಿ ನಡೆಸಿದ್ದು, 20 ಲೀಟರ್‍ ಬೆಲ್ಲದ ಕೊಳೆ ಮತ್ತು 20 ಲೀಟರ್‍ ಕಳ್ಳಬಟ್ಟಿ ಸಾರಾಯಿ ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ. ಎರಡು ಪ್ರಕರಣದಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಅಬಕಾರಿ ಇಲಾಖೆ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಸಾಗರ ಉಪ ವಿಭಾಗದ  ಸಿಬ್ಬಂದಿಗಳು, ಸೊರಬ ವಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ದಾಳಿ 3 – ಸುಳ್ಳೂರು ಗ್ರಾಮದ ಧರ್ಮಪ್ಪ ಎಂಬುವವರ ಮನೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. 80 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment