ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 9 ಸೆಪ್ಟಂಬರ್ 2020
ಸಾಗರ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ನೂರು ಲೀಟರ್ ಬೆಲ್ಲದ ಕೊಳೆ ಮತ್ತು ನಾಲ್ಕು ಲೀಟರ್ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ.
ತಡಗಳಲೆ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಕನ್ನಪ್ಪ (40) ಎಂಬುವವರ ಮನೆ ಮತ್ತು ಆವರಣದಲ್ಲಿ ದಾಸ್ತಾನು ಮಾಡಿದ್ದ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯದ 11,500 ರಂದು ಅಂದಾಜು ಮಾಡಲಾಗಿದೆ. ಕನ್ನಪ್ಪ ಪರಾರಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
ವಿವಿಧೆಡೆ ಶೋಧ ಕಾರ್ಯ
ಗಾಂಜಾ ನಿರ್ಮೂಲನೆ ಮತ್ತು ಕಳ್ಳಭಟ್ಟಿಗೆ ಬ್ರೇಕ್ ಹಾಕುವ ಸಲುವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಇವತ್ತು ಸಾಗರ ತಾಲೂಕಿನ ವಿವಿಧೆಡೆ ದಿಢಿರ್ ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು. ತಡಗಳಲೆ, ಸೈದೂರು, ಸುಳ್ಳೂರು ಮತ್ತು ಕಣಸೆ ಗ್ರಾಮಗಳಲ್ಲಿ, ವರದಾ ನದಿ ತೀರ, ತೋಟ, ಗದ್ದೆ, ಮೆಕ್ಕೆಜೋಳದ ಹೊಲ ಮತ್ತು ಅರಣ್ಯ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಲಾಯಿತು.
ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಾಗರ ವಲಯದ ನಿರೀಕ್ಷಕ ಡಿ.ಎನ್.ಹನುಮಂತಪ್ಪ, ಸಾಗರ ವಲಯ ಮತ್ತು ಜಿಲ್ಲಾ ತಂಡದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422