ಸಾಗರ: ದಸರಾ ಮತ್ತು ದೀಪಾವಳಿ ಹಬ್ಬಗಳ ಹಿನ್ನೆಲೆ ಯಶವಂತಪುರ – ಶಿವಮೊಗ್ಗ ರೈಲನ್ನು ತಾಳಗುಪ್ಪದವರೆಗೂ ವಿಸ್ತರಿಸಬೇಕು ಎಂದು ಸಾಗರದ ರೈಲ್ವೆ ಹೋರಾಟ ಸಮಿತಿ ಒತ್ತಾಯಿಸಿದೆ. (ಈ ಸುದ್ದಿಯನ್ನು ಇನ್ನು 36 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಈ ಕುರಿತು ರೈಲ್ವೆ ಹೋರಾಟ ಸಮಿತಿಯ ಕಾರ್ಯದರ್ಶಿ ಎಸ್.ಜಿ. ಕುಮಾರಸ್ವಾಮಿ ಅವರು ರೈಲ್ವೆ ಇಲಾಖೆಯ ಉನ್ನತಾಧಿಕಾರಿಗಳು ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಹಬ್ಬದ ಸಂದರ್ಭ ಸಾಲು-ಸಾಲು ರಜೆಗಳು ಇರುವುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಿರಲಿದೆ. ಜೊತೆಗೆ ಶಾಲಾ ರಜೆಗಳೂ ಇರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಿರಲಿದೆ. ಆದ್ದರಿಂದ ಈ ಅವಧಿಯಲ್ಲಿ ರೈಲು ಸಂಚಾರವನ್ನು ತಾಳಗುಪ್ಪದವರೆಗೆ ವಿಸ್ತರಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ರೈಲು ಮಾರ್ಗ ತಾಳಗುಪ್ಪದವರೆಗೆ ವಿಸ್ತರಣೆಯಾದರೆ ಆನಂದಪುರಂ ಮತ್ತು ಸಾಗರ ಭಾಗದ ಪ್ರಯಾಣಿಕರು ಮಾತ್ರವಲ್ಲದೆ, ರಿಪ್ಪನ್ಪೇಟೆ, ತಾಳಗುಪ್ಪ, ಸಿದ್ದಾಪುರ ಹಾಗೂ ಶಿರಸಿ ಭಾಗದ ಜನರಿಗೂ ಅನುಕೂಲವಾಗಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.