ಶಾಲೆಗಳಿಗೆ ರಜೆ ವಿಚಾರ, ವೈರಲ್‌ ಆಯ್ತು ತಪ್ಪು ಸಂದೇಶ, ವಾಸ್ತವದಲ್ಲಿ ಶಿಕ್ಷಣ ಇಲಾಖೆ ಘೋಷಿಸಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 7 JULY 2023

SAGARA / HOSANAGARA : ವ್ಯಾಪಕ ಮಳೆಯಾಗುತ್ತಿರುವ ಪ್ರದೇಶದಲ್ಲಿ ಸ್ಥಳೀಯ ಶಾಲಾಭಿವೃದ್ಧಿ ಸಮಿತಿ ಮತ್ತು ಆಡಳಿತ ಮಂಡಳಿ ತೀರ್ಮಾನದಂತೆ ರಜೆ (Holiday) ಘೋಷಿಸಲು ಶಿಕ್ಷಣ ಇಲಾಖೆ ಮೌಖಿಕವಾಗಿ ಆದೇಶಿಸಿದೆ. ಈ ಮಧ್ಯೆ ಶಾಲೆಗಳಿಗೆ ರಜೆ ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಗೊಂದಲ ಸೃಷ್ಟಿಯಾಗಿತ್ತು.

Maxx-Hospital-lady-Staff-walking-holding-umbrella-in-Rain

ಸಾಗರದ ಕರೂರು ಹೋಬಳಿ

ಸಾಗರ ತಾಲೂಕು ಕರೂರು ಹೋಬಳಿಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 82.4 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾದ ಹೋಬಳಿ ಇದಾಗಿದೆ. ಇಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ತೀವ್ರತೆ ಸ್ವಲ್ಪ ಕಡಿಮೆಯಾಗಿದೆ. ಇವತ್ತು ರಾತ್ರಿ ಅಥವಾ ಶನಿವಾರ ಬೆಳಗ್ಗೆ ಮಳೆ ಹೆಚ್ಚಾದಲ್ಲಿ ಶಾಲೆಗಳಿಗೆ ರಜೆ ಘೋಷಿಸುವ ಸಾದ್ಯತೆ ಇದೆ.

ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ನಿಂಗಪ್ಪ, ಮಳೆ ಹೆಚ್ಚಾಗಿ ಮಕ್ಕಳು ಶಾಲೆಗೆ ಬರಲು ಆಗದಿರುವ ಪರಿಸ್ಥಿತಿ ಇದ್ದಲ್ಲಿ ಮಾತ್ರ ರಜೆ (Holiday) ಘೋಷಿಸಬಹುದು. ಗ್ರಾಮ ಪಂಚಾಯಿತಿ ಮುಖಂಡರು, ಶಾಲಾಭಿವೃದ್ಧಿ ಸಮಿತಿ ಮತು ಶಾಲೆಯ ಆಡಳಿತ ಮಂಡಳಿ ತಮ್ಮ ಹಂತದಲ್ಲಿ ತೀರ್ಮಾನ ಕೈಗೊಂಡು ಆಯಾ ಶಾಲೆಗಳಿಗೆ ರಜೆ ಘೋಷಿಸಬಹುದಾಗಿದೆ ಎಂದರು.

ಹೊಸನಗರದ ನಗರ ಹೋಬಳಿ

ಹೊಸನಗರ ತಾಲೂಕು ನಗರ ಹೋಬಳಿಯಲ್ಲು ಎಡೆಬಿಡದೆ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 70.9 ಮಿ.ಮೀ ಮಳೆಯಾಗಿದೆ. ಈ ಹಿನ್ನೆಲೆ ಅಗತ್ಯವಿದ್ದಲ್ಲಿ ಶಾಲೆಗಳಿಗೆ ರಜೆ ನೀಡಲು ಶಾಲಾಭಿವೃದ್ಧಿ ಸಮಿತಿ ಮತ್ತು ಆಡಳಿತ ಸಮಿತಿಗೆ ಅವಕಾಶ ನೀಡಲಾಗಿದೆ.

ನಿಟ್ಟೂರು ಸೇರಿದಂತೆ ನಗರ ಹೋಬಳಿಯಲ್ಲಿ ವ್ಯಾಪಕ ಮಳೆ ಮತ್ತು ಗಾಳಿ ಬೀಸುತ್ತಿರುವ ವರದಿಯಾಗಿದ್ದು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಡಿಡಿಪಿಐ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಕೃಷ್ಣಮೂರ್ತಿ, ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ

ಆಯಾ ಶಾಲಾ ವ್ಯಾಪ್ತಿಯಲ್ಲಿ ಮಳೆ ಮತ್ತು ಗಾಳಿಯ ತೀವ್ರತೆ ಇದ್ದರೆ ರಜೆ ನೀಡಲು ಶಾಲಾಭಿವೃದ್ಧಿ ಸಮಿತಿ ಮತ್ತು ಆಡಳಿತ ಮಂಡಳಿಗೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕು, ಹೋಬಳಿಯಲ್ಲಿ ಎಷ್ಟು ಮಳೆಯಾಗಿದೆ? ಕಳೆದ 24 ಗಂಟೆಯ ಕಂಪ್ಲೀಟ್‌ ರಿಪೋರ್ಟ್‌

ವೈರಲ್‌ ಆಯ್ತು ತಪ್ಪು ಸಂದೇಶ

ಕರೂರು ಹೋಬಳಿಯಲ್ಲಿ ರಜೆ ಘೋಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್‌ ವೈರಲ್‌ ಆಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಕ್ಷೇತ್ರ ಶಿಕ್ಷಣಾದಿಕಾರಿ ಕೆ.ಟಿ.ನಿಂಗಪ್ಪ ಸ್ಪಷ್ಟನೆ ನೀಡಿದ್ದಾರೆ.

ಶಾಲೆಗಳಿಗೆ ರಜೆ ಎಂದು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಮಳೆ ಹೆಚ್ಚಾಗಿ ಮಕ್ಕಳು ಬರಲು ಕಷ್ಟವಾದರೆ ಮಾತ್ರ ಸ್ಥಳೀಯವಾಗಿ ತೀರ್ಮಾನ ಕೈಗೊಂಡು ರಜೆ ಘೋಷಿಸಬಹುದಾಗಿದೆ ಎಂದು ತಿಳಿಸಿದ್ದೆವು. ಆದರೆ ಕೆಲವರು ರಜೆ ಎಂದು ತಪ್ಪು ಸಂದೇಶ ರವಾನಿಸಿದ್ದಾರೆ.ಕೆ.ಟಿ.ನಿಂಗಪ್ಪ, ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿ

ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಆದರೆ ಪ್ರಮಾಣ ಸ್ವಲ್ಪ ತಗ್ಗಿದೆ. ಒಂದು ವೇಳೆ ಮಳೆ ಹೆಚ್ಚಾದರೆ ಶಾಲೆಗಳಿಗೆ ರಜೆ ಘೋಷಿಸಬಹುದಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 7, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment