ಶಿವಮೊಗ್ಗ ಲೈವ್.ಕಾಂ | SAGARA | 15 ಫೆಬ್ರವರಿ 2020

ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ತಾಲೂಕು ಘಟಕ ನಗರದ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ಮಾಜಿ ಶಾಸಕಬೇಳೂರು ಗೋಪಾಲಕೃಷ್ಣ, ರೈತರು ಸಂಕಷ್ಟದಲ್ಲಿರುವ ಈ ಹೊತ್ತಿನಲ್ಲಿ ಶಾಸಕರು ಡಾನ್ಸ್, ಕೆರೆಹಬ್ಬ ಬಿಟ್ಟು ಕೃಷಿಕರ ಸಮಸ್ಯೆಗೆ ಸ್ಪಂದಿಸಲಿ. ರೈತರು ಸಮೃದ್ದಿ ಆಗಿದ್ದಾಗ ನೀವು ರಾಜ್ಯಾದ್ಯಂತ ಕೆರೆಹಬ್ಬ ಆಚರಿಸಿಕೊಳ್ಳಿ ಎಂದು ಕುಟುಕಿದರು. ಕಳೆದ ಸಾಲಿನಲ್ಲಿ ಮಳೆ ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಆಗಿದೆ. ರಾಜ್ಯದ ಎಲ್ಲ ಡ್ಯಾಂಗಳು ಭರ್ತಿಯಾಗಿವೆ. ಆದರೆ ರೈತರಿಗೆ ಮಾತ್ರ ಸಮರ್ಪಕ ವಿದ್ಯುತ್ ಪೂರೈಸದೆ ಸರ್ಕಾರ ವಂಚಿಸುತ್ತಿದೆ ಎಂದು ದೂರಿದರು. .
ಸಿಎಂ ಹಸಿರು ಶಾಲು ಹೊದ್ದು ಪ್ರಮಾಣವಚನ ಸ್ವೀಕರಿಸಿದ್ದು ಸರಿ. ತಾವು ರೈತನ ಮಗನೆಂದೂ ಹೇಳುತ್ತಾರೆ. ಆದರೆ ಜಿಲ್ಲೆಯ ರೈತರಿಗೆ ಸಮರ್ಪಕ ವಿದ್ಯುತ್ ನೀಡದ ಸಿಎಂ ರಾಜ್ಯದ ರೈತರಿಗೆ ಹೇಗೆ ವಿದ್ಯುತ್ ಪೂರೈಕೆ ನೀತಿ ರೂಪಿಸುತ್ತಾರೆ? ಮೊದಲು ಜಿಲ್ಲೆಯ ರೈತರಿಗೆ ಸಮರ್ಪಕ ವಿದ್ಯುತ್ ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದರು.
ಶಾಸಕರೇ ಹೋದಲೆಲ್ಲ ಧರಣಿ ಕುಳಿತುಕೊಳ್ಳುತ್ತಿದ್ದು ಅಧಿಕಾರಿಗಳು ಮಾತು ಕೇಳದ ಸ್ಥಿತಿ ನಿರ್ಮಾಣವಾಗಿದೆ. ಇದು ಅವರ ಆಡಳಿತ ವೈಫಲ್ಯಕ್ಕೆ ಸಾಕ್ಷಿ. ಸಿಎಂ ತವರು ಕ್ಷೇತ್ರದಲ್ಲಿ ಸಮರ್ಪಕ ವಿದ್ಯುತ್ ಇರುತ್ತದೆ. ಸಾಗರ ಕೇತದ ರೈತರಿಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ದೂರಿದರು.
ರೈತ ಸಂಘದ ಪ್ರಮುಖರಾದ ಕೆ.ಬಿ.ಸೇನಾಪತಿ ಗೌಡ, ಅರುಣ್ ಕುಮಾರ್, ಗುರುಮೂರ್ತಿ, ಮಹಾಬಲೇಶ್ವರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ಕೃಷ್ಣಮೂರ್ತಿ ಬಿಳಿಗಲ್ಲೂರು, ಕೆ.ಹೊಳೆಯಪ್ಪ, ಕಲಸೆ ಚಂದಪ್ಪ, ಗಾಮಪ್ಪ ಸೂರನಗದ್ದೆ, ಮುರಳಿ ಮಂಚಾಲೆ, ಕೆ.ಎಸ್.ವೆಂಕಟೇಶ್, ಮೋಹನ್, ಸಂದೀಪ್ ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
Farmers Protest against in adequate power in Sagara. Famers led by Raitha Sangha and Hasiru Sene led the protest. Ex MLA Beluru Gopalakrishna Participated in the protest.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200