ಜ.4ರಂದು ಕರಾಳ ದಿನ ಆಚರಣೆ, ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 2 JANUARY 2023

SAGARA : ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಬೇಸತ್ತು ರೈತ ಸಂಘದ ಸಂಸ್ಥಾಪನಾ ದಿನದಂದು ಕರಾಳ ದಿನವನ್ನಾಗಿ ಆಚರಿಸಲಾಗುತ್ತದೆ. ಜನವರಿ 4ರಂದು ರೈತರು ಕಪ್ಪು ಪಟ್ಟಿ ಧರಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್‌ ಶಿರವಾಳ ತಿಳಿಸಿದರು.

ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್‌ ಶಿರವಾಳ, ರೈತರು ಮತ್ತು ರೈತ ಸಂಘವನ್ನು ನಿಕೃಷ್ಟವಾಗಿ ಕಾಣಲಾಗುತ್ತಿದೆ. ಯಾವುದೆ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಅಸಡ್ಡೆ ಖಂಡಿಸಿ ಜ.4ರಂದು ಕರಾಳ ದಿನವನ್ನು ಆಚರಿಸಲಾಗುತ್ತದೆ. ತಾಳಗುಪ್ಪದಲ್ಲಿ ಕರಾಳ ದಿನಾಚರಣೆ ನಡೆಸಲಾಗುತ್ತದೆ. ಜಿಲ್ಲೆಯಾದ್ಯಂತ ರೈತರು ಅಂದು ಪ್ರತಿಭಟನೆ ನಡೆಸಲಿದ್ದಾರೆ ಎಂದರು.

ಇದನ್ನೂ ಓದಿ – ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಚಿಕ್ಕಮಗಳೂರಿನ ಯುವಕರು, ವಿಡಿಯೋ ವೈರಲ್‌

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment