ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 JANUARY 2024
SAGARA : ರಾಜ್ಯ ಸರ್ಕಾರ ಪಂಪ ಪ್ರಶಸ್ತಿ ಘೋಷಿಸಿರುವ ಹಿನ್ನೆಲೆ ಸಾಹಿತಿ ನಾ. ಡಿಸೋಜಾ ಅವರನ್ನು ನಾಗರಿಕರ ಪರವಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿದರು. ಮನೆ ಮುಂಭಾಗದಲ್ಲಿ ನಾ. ಡಿಸೋಜಾ ಅವರನ್ನು ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯ ಸರ್ಕಾರ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ ಘೋಷಿಸಿರುವುದು ಸಾಗರ ತಾಲೂಕಿನ ಜನ ಸಂಭ್ರಮ ಪಡುತ್ತಿದಾರೆ. ಈಗಾಗಲೇ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ. ಇದು ಅವರ ಸಾಹಿತ್ಯದ ಹಿರಿಮೆ ಎಂದು ತಿಳಿಸಿದರು.
ಪ್ರಮುಖರಾದ ಚೇತನ್ ರಾಜ್ ಕಣ್ಣೂರು, ಸುರೇಶ್ ಬಾಬು, ದಿನೇಶ್, ಸೋಮಶೇಖರ್ ಲ್ಯಾವಿಗೆರೆ, ಅಶೋಕ ಬೇಳೂರು, ನಗರಸಭೆ ಸದಸ್ಯ ಗಣಪತಿ ಮಂಡಗಳಲೆ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಸವಳಂಗ ರಸ್ತೆ ಸೇತುವೆ, ಕಾಮಗಾರಿ ಬಾಕಿ ಇರುವಾಗಲೆ ವಾಹನ ಸಂಚಾರ ಶುರು, ಅಕ್ಕಪಕ್ಕದ ಬಡಾವಣೆ ವಾಸಿಗಳ ನಿಟ್ಟುಸಿರು
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





