
ಶಿವಮೊಗ್ಗ ಲೈವ್.ಕಾಂ | SAGARA NEWS | 13 APRIL 2021
ತೋಟದ ಮನೆಗೆ ಬೆಂಕಿ ಬಿದ್ದು ದೊಡ್ಡ ಪ್ರಮಾಣದಲ್ಲಿ ಅಡಕೆ ಮತ್ತು ಕಾಳು ಮೆಣಸು ಸುಟ್ಟು ಹೋಗಿವೆ.
ಮೂರನೆ ಪ್ಯಾರಾ ಈ ಜಾಹೀರಾತಿನ ಕೆಳಗಿದೆ

ಸಾಗರ ತಾಲೂಕು ಹೆಸರಬೈಲು ಗ್ರಾಮದಲ್ಲಿ ಘಟನೆ ನಡೆದಿದೆ. ಸಾಗರದ ಹೊಯ್ಸಳ ಎಂಬುವವರ ತೋಟದ ಮನೆಗೆ ಆಕಸ್ಮಿಕವಾಗಿ ಬೆಂಕಿ ತುಗಲಿತ್ತು.
ತೋಟದ ಮನೆಯಲ್ಲಿ ಸುಮಾರು 80 ಕ್ವಿಂಟಾಲ್ ಅಡಕೆ ಮತ್ತು 20 ಕ್ವಿಂಟಾಲ್ ಕಾಳು ಮೆಣಸು ಇರಿಸಲಾಗಿತ್ತು. ಇದೆಲ್ಲವು ಬೆಂಕಿಗೆ ಆಹುತಿಯಾಗಿದೆ. ಸಾಗರದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸುವ ಹೊತ್ತಿಗೆ ಬೆಂಕಿ ಇಡೀ ತೊಟದ ಮನೆಯನ್ನು ಆವರಿಸಿಕೊಂಡಿತ್ತು.
ತಾ.ಪಂ. ಅಧ್ಯಕ್ಷ ಭೇಟಿ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ಪಡೆದರು.
ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com





