ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | KARGAL NEWS | 12 ಜುಲೈ 2021
ಲಾಡ್ಜ್‍ನಲ್ಲಿ ರಾತ್ರಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕೆಲಕಾಲ ಆತಂಕಕ್ಕೀಡಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣ ಹಾನಿಯಾಗಿಲ್ಲ.
ಸಾಗರ ತಾಲೂಕು ಕಾರ್ಗಲ್ ಪಟ್ಟಣದ ಲಾಡ್ಜ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮೂರನೆ ಮಹಡಿಯ ಕೊಠಡಿಯೊಂದರಲ್ಲಿ ಬೆಂಕಿ ಆವರಿಸಿಕೊಂಡಿತ್ತು. ಹಾಸಿಗೆ, ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳನ್ನು ಇರಿಸಿದ್ದರಿಂದ ಬೆಂಕಿ ಜೋರಾಗಿ ಉರಿದಿದೆ. ಕಿಟಕಿಯಿಂದ ಬೆಂಕಿಯ ರಭಸ ಕಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರ ನೆರವಿನಿಂದ ಪೊಲೀಸರು ಲಾಡ್ಜ್‍ನಲ್ಲಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆ ತಂದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಲಾಡ್ಜ್‍ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಗಲ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

About The Editor
ನಿತಿನ್ ಆರ್.ಕೈದೊಟ್ಲು
















