ಲಾಡ್ಜ್ ಕೊಠಡಿಯಲ್ಲಿ ದಿಢೀರ್ ಬೆಂಕಿ, ಧಗಧಗ ಉರಿದ ಪೀಠೋಪಕರಣ, ಸ್ಥಳೀಯರಲ್ಲಿ ಕೆಲಕಾಲ ಆತಂಕ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS
ಶಿವಮೊಗ್ಗ ಲೈವ್.ಕಾಂ | KARGAL NEWS | 12 ಜುಲೈ 2021
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಲಾಡ್ಜ್‍ನಲ್ಲಿ ರಾತ್ರಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕೆಲಕಾಲ ಆತಂಕಕ್ಕೀಡಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣ ಹಾನಿಯಾಗಿಲ್ಲ.

ಸಾಗರ ತಾಲೂಕು ಕಾರ್ಗಲ್ ಪಟ್ಟಣದ ಲಾಡ್ಜ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮೂರನೆ ಮಹಡಿಯ ಕೊಠಡಿಯೊಂದರಲ್ಲಿ ಬೆಂಕಿ ಆವರಿಸಿಕೊಂಡಿತ್ತು. ಹಾಸಿಗೆ, ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳನ್ನು ಇರಿಸಿದ್ದರಿಂದ ಬೆಂಕಿ ಜೋರಾಗಿ ಉರಿದಿದೆ. ಕಿಟಕಿಯಿಂದ ಬೆಂಕಿಯ ರಭಸ ಕಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರ ನೆರವಿನಿಂದ ಪೊಲೀಸರು ಲಾಡ್ಜ್‍ನಲ್ಲಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆ ತಂದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಲಾಡ್ಜ್‍ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಗಲ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment