ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 APRIL 2023
SAGARA : ಮಗಳು ಡಾ.ರಾಜನಂದಿನಿ ಕಾಂಗ್ರೆಸ್ ತೊರೆದು ದಿಢೀರ್ ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮೊದಲ ಪ್ರತಿಕ್ರಿಯೆ (First reaction) ನೀಡಿದ್ದಾರೆ.

ರಾಜಕೀಯದಲ್ಲಿ ಬದ್ಧತೆ ಇರಬೇಕು
ಡಾ.ರಾಜನಂದಿನಿ ಅವರು ಈ ರೀತಿ ಮಾಡುತ್ತಾರೆ ಎಂದು ನಾನು ಕನಸು ಮನಸಿನಲ್ಲಿಯು ಅಂದುಕೊಂಡಿರಲಿಲ್ಲ. ರಾಜಕೀಯದಲ್ಲಿ ಸ್ಥಿರತೆ, ಬದ್ಧತೆ ಇಟ್ಟುಕೊಳ್ಳಬೇಕು. ಬದ್ಧತೆಯಿಂದಾಗಿಯೇ ನಾವು ಇಷ್ಟೊಂದು ಕೆಲಸ ಮಾಡಲು ಸಾಧ್ಯವಾಗಿದೆ ಎಂದು ಕಾಗೋಡು ತಿಮ್ಮ ಪ್ಪ ತಿಳಿಸಿದರು.
ಇದನ್ನೂ ಓದಿ – ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ದಿಢೀರ್ ಬಿಜೆಪಿ ಸೇರ್ಪಡೆ, ಕಾರಣವೇನು? ಮುಂದೇನು?
ಎದೆಗೆ ಚೂರಿ ಹಾಕಿದಂತೆ
ಇಂತಹ ಸನ್ನಿವೇಶದಲ್ಲಿ ಬಿಜೆಪಿ ಸೇರ್ಪಡೆಯಾಗಿರುವುದು ನನ್ನ ಎದೆಗೆ ಚೂರಿ ಹಾಕಿದಂತೆ ಆಗಿದೆ. ಮಗಳಾಗಿ ಈ ರೀತಿ ನಡೆದುಕೊಳ್ಳುತ್ತಾಳೆ ಎಂದು ಕನಸಿನಲ್ಲಿಯು ಕಂಡಿರಲಿಲ್ಲ. ನಾನು ಕಾಂಗ್ರೆಸ್ ತೊರೆಯುವುದಿಲ್ಲ. ಕಾಂಗ್ರೆಸ್ ಪರವಾಗಿಯೇ ಈ ಚುನಾವಣೆಯಲ್ಲಿ ಕೆಲಸ ಮಾಡುತ್ತೇನೆ. ಅವರು ಬಿಜೆಪಿ ಸೇರ್ಪಡೆಯಾದ ವಿಚಾರ ಈಗಷ್ಟೆ ಗೊತ್ತಾಯಿತು. ಮನವೊಲಿಸುವ ಪ್ರಯತ್ನ ಮಾಡುತ್ತೇನೆ ಎಂದು ಕಾಗೋಡು ತಿಮ್ಮಪ್ಪ ಹೇಳಿದರು.
ರಾಜಕೀಯ ಅವಕಾಶ ಇತ್ತು
ರಾಜನಂದಿನಿ ಅವರು ನನ್ನೊಂದಿಗೆ ಈ ವಿಚಾರ ಹೇಳಿಕೊಳ್ಳಲಿಲ್ಲ. ಈ ಬಗ್ಗೆ ಬೇಸರವಿದೆ. ಕಾಂಗ್ರೆಸ್ ಪಕ್ಷದಲ್ಲಿಯೇ ರಾಜಕೀಯ ಅವಕಾಶವಿತ್ತು. ಒಮ್ಮೆ ಯು ಬಿಜೆಪ ಸೇರ್ಪಡೆ ಕುರಿತು ನನ್ನೊಂದಿಗೆ ಹೇಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು
















