ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
ಸಾಗರ | ಮಲೆನಾಡಿನಲ್ಲಿ ಕಾಡು ಉಳಿಯಲು ರೈತರು ಕಾರಣವೆ ಹೊರತು ಅರಣ್ಯ (FOREST) ಇಲಾಖೆಯಲ್ಲ. ಕಾಡು ಉಳಿಸಿದ ರೈತರ ಕೈಗೆ ಸ್ಲೇಟ್ ನೀಡಿ, ಭಯೋತ್ಪಾದಕರ ಹಾಗೆ ಫೋಟೊ ಹೊಡೆಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಸಾಗರದ ಸಾಮರ್ಥ್ಯ ಸೌಧದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ಅರಣ್ಯ ಇಲಾಖೆ ರೈತರ ಮಕ್ಕಳ ವಿರುದ್ಧ ಇಲ್ಲಸಲ್ಲದ ಕೇಸ್ ದಾಖಲು ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತoಪಡಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅರಣ್ಯ ಇಲಾಖೆ ಅಡ್ಡಿಪಡಿಸಬಾರದು
ರಸ್ತೆ, ವಿದ್ಯುತ್ ಯೋಜನೆಗಳಿಗೆ ಅರಣ್ಯ (FOREST) ಇಲಾಖೆ ಅಡ್ಡಿಪಡಿಸಬಾರದು. 30 ಮರ ಕಡಿದರೆ 300 ಮರಗಳನ್ನು ನೆಡುವ ಹಾಗೆ ಸೀಡ್ ಬಾಲ್, ಬೀಜಗಳನ್ನು ಕೊಟ್ಟು ಅವರನ್ನು ಕೆಲಸಕ್ಕೆ ಹಚ್ಚಬೇಕು. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಡಿಪಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಶಾಸಕ ಹಾಲಪ್ಪ ಅವರು ಸೂಚಿಸಿದರು.
ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಈಗ 4 ಆಂಬುಲೆನ್ಸ್’ಗಳಿವೆ. ಆದರೆ 108 ಆಂಬುಲೆನ್ಸ್ ಸೇವೆ ಇಲ್ಲ ಎಂದು ಆರೋಪಿಸಿ, ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಅವರು ಸ್ಥಳೀಯರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ವಿಫಲವಾಗಿದ್ದಾರೆ ಎಂದು ಶಾಸಕ ಹರತಾಳು ಹಾಲಪ್ಪ ಬೇಸರ ವ್ಯಕ್ತಪಡಿಸಿದರು.
ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಮಲ್ಲಪ್ಪ ಕೆ. ತೊದಲಬಾವಿ, ತಾಲೂಕ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಎಂ.ಕಮ್ಮಾರ್, ಕೆಡಿಪಿ ಸದಸ್ಯರಾದ ಗೌತಮ ಎಸ್, ಪಶುಪತಿ, ದೇವೇಂದ್ರಪ್ಪ, ಸುವರ್ಣ ಟೀಕಪ್ಪ, ಈಶ್ವರ ಡಿ.ಹೆಚ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ – ಮನೆ ಮನೆಗೂ ತಿರಂಗ, ಸಾಗರದಲ್ಲಿ ರೆಡಿಯಾಗ್ತಿದೆ 50 ಸಾವಿರ ರಾಷ್ಟ್ರಧ್ವಜ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.