SHIVAMOGGA LIVE NEWS | 17 JANUARY 2023
SAGARA | ಮಾಜಿ ಶಾಸಕ (Former MLA), ಸಹಕಾರಿ ಧುರೀಣ ಎಲ್.ಟಿ.ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋ ಸಹಜ ಕಾರಣಗಳಿಗೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಎಲ್.ಟಿ.ತಿಮ್ಮಪ್ಪ ಹೆಗಡೆ ಅವರ ನಿಧನದ ವಿಚಾರ ತಿಳಿಯುತ್ತಿದ್ದಂತೆ ಅವರ ಪರಿಚಿತರು, ಬೆಂಬಲಿಗರು, ಸಾಗರದ ನಾಗರಿಕರು ಕಂಬನಿ ಮಿಡಿದಿದ್ದಾರೆ. ಪತ್ನಿ ಸಾವಿತ್ರಮ್ಮ, ಪುತ್ರರಾದ ತಿಮ್ಮಪ್ಪ, ಅಶೋಕ, ಸಹೋದರ ಗಣಪತಿ ಹೆಗಡೆ ಸೇರಿದಂತೆ ದೊಡ್ಡ ಸಂಖ್ಯೆಯ ಬಂಧು ಬಾಂಧವರನ್ನು ಅಗಲಿದ್ದಾರೆ.
![]() |
ಗೊತ್ತಿರಬೇಕಾದ 5 ವಿಚಾರಗಳಿವು
ಸಂಗತಿ 1 – ಎಲ್.ಟಿ.ತಿಮ್ಮಪ್ಪ ಹೆಗಡೆ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿ ಎರಡು ಭಾರಿ ಸಾಗರ ಕ್ಷೇತ್ರದ ಶಾಸಕರಾಗಿದ್ದರು. 1978 ಮತ್ತು 1983ರಲ್ಲಿ ಶಾಸಕರಾಗಿ (Former MLA) ಜವಾಬ್ದಾರಿ ನಿಭಾಯಿಸಿದ್ದರು.
ಸಂಗತಿ 2 – ಸಾಗರದಲ್ಲಿ ಆಪ್ಸ್ ಕೋಸ್, ತೋಟಗಾರ್ಸ್, ಅಡಕೆ ಬೆಳೆಗಾರರ ಸಂಘಗಳ ಸಂಸ್ಥಾಪಕ ಅಧ್ಯಕ್ಷರಾಗಿದ್ದರು. ಕ್ಯಾಂಪ್ಕೊ ಸಂಸ್ಥೆಯನ್ನು ಹುಟ್ಟುಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾಗಿದ್ದರು.
ಸಂಗತಿ 3 – ಸಾಗರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಹೆಸರು ಹೊಂದಿದ್ದರು. ಪ್ರತಿಷ್ಠಿತ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಎಲ್.ಬಿ ಕಾಲೇಜು, ಪ್ರಗತಿ ಸಂಯುಕ್ತ ಶಾಲೆ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದರು. ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನಕ್ಕೆ ಬಹುಕಾಲ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಇದನ್ನೂ ಓದಿ – ಅಡಕೆ ಧಾರಣೆ | 16 ಜನವರಿ 2023 | ಶಿವಮೊಗ್ಗ, ಸಾಗರ, ಚಿತ್ರದುರ್ಗ, ತುಮಕೂರಿನಲ್ಲಿ ಎಷ್ಟಿದೆ ಅಡಕೆ ರೇಟ್?
ಸಂಗತಿ 4 – ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಚುಟವಟಿಕೆಯಲ್ಲಿ ಪ್ರಮುಖರಾಗಿದ್ದರು. ಹಟ್ಟಿಯಂಗಡಿ ಸಿದ್ಧಿ ವಿನಾಯಕ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ಮತ್ತು ಸಿದ್ಧಿ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾಗಿದ್ದರು.
ಸಂಗತಿ 5 – ಕೇಂದ್ರ ಸಾಂಬಾರು ಮಂಡಳಿಯ ನಿರ್ದೇಶಕರಾಗಿ, ಭೂ ನ್ಯಾಯ ಮಂಡಳಿ, ಲ್ಯಾಂಡ್ ಗ್ರಾಂಟ್ ಸಮಿತಿಗಳಲ್ಲಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200