ಮರಕ್ಕೆ ನೇಣು ಬಿಗಿದುಕೊಂಡು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಆತ್ಮಹತ್ಯೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SAGARA NEWS | 25 JUNE 2021

ಸಾಗರ ತಾಲೂಕು ಪಂಚಾಯಿತಿ ಮಾಜಿ ಸದಸ್ಯರೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಕಾರಣದಿಂದ ಮನನೊಂದು ಈ ನಿರ್ಧಾರ ಕೈಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಅದರಂತೆ ಗ್ರಾಮದ ಚಂದ್ರಶೇಖರ ಗೌಡ (55) ಅವರು ಬುಧವಾರ ರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರ ಗೌಡ ಅವರು 2005 ರಿಂದ 2010ರವರೆಗೆ ಕೆಳದಿ ಕ್ಷೇತ್ರದಿಂದ ತಾಲೂಕು ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು.

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಚಂದ್ರಶೇಖರ ಗೌಡ, ವಿವಿಧ ಕಾರಣಕ್ಕೆ ಸಾಲ ಮಾಡಿಕೊಂಡಿದ್ದರು. ಇದನ್ನು ತೀರಿಸಲು ಕಷ್ಟವಾಗುತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್‍ಐ ಭರತ್‍ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.

200513188 1141345859678656 2336811118303997815 n.jpg? nc cat=101&ccb=1 3& nc sid=730e14& nc ohc=hjta83CxAQoAX rrA 9&tn=XgSJ3kUX1No5RJvs& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment