ಸಾಗರ : ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ರಥೋತ್ಸವವು (Ratotsava) ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ರಥೋತ್ಸವ ಕಣ್ತುಂಬಿಕೊಂಡು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.
ಗಣಪತಿಯ ವಿಗ್ರಹವನ್ನು ಅಲಂಕೃತ ರಥದಲ್ಲಿ (Ratotsava) ಕುಳ್ಳಿರಿಸಿ ಪೂಜೆ ಸಲ್ಲಿಸಲಾಯಿತು. ಮಂಗಳವಾರ ಬೆಳಗ್ಗೆ 9.45 ರಿಂದ ಬೆಳಗ್ಗೆ 10.05ರವರೆಗೆ ಭಕ್ತರು ಹರ್ಷೋದ್ಗಾರಗಳ ನಡುವೆ ರಥವನ್ನು ಎಳೆದರು. ಇಷ್ಟಾರ್ಥಗಳ ಈಡೇರಿಕೆಗೆ ಭಕ್ತರು ರಥದತ್ತ ಬಾಳೆಹಣ್ಣು ತೂರಿದರು.
![]() |
ರಾತ್ರಿ ರಥದ ರಾಜಬೀದಿ ಉತ್ಸವ ನಡೆಯಿತು. ಏ.2ರಂದು ಕುಂಕುಮೋತ್ಸವ, ಅವಭೃತ, ಅಂಕುರಾರ್ಪಣೆ, 3ರಂದು ಗಣಪತಿ ಹವನ, 4ರಂದು ಸಾರ್ವತ್ರಿಕ ಗಣಹೋಮ, ಏ.2ರಿಂದ 5 ದಿನ ಸಂಜೆ 6ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಿ.ಕೆ.ಪ್ರಮೀಳಾಕುಮಾರಿ ತಿಳಿಸಿದರು.
ಹಿಂದಿನ ವರ್ಷಗಳಿಗಿಂತಲು ಹೆಚ್ಚಿನ ಸಂಖ್ಯೆಯ ಭಕ್ತರು ಈ ಬಾರಿಯ ರಥೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಇಡೀ ದೇಶ ಸುಭಿಕ್ಷವಾಗಿರಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ. 2 ಕೋಟಿ ರೂ. ವೆಚ್ಚದಲ್ಲಿ ಗಣಪತಿ ದೇವಸ್ಥಾನದ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಜಾತ್ರೆ ನಂತರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಉದ್ದೇಶವಿದೆ.
– ಬೇಳೂರು ಗೋಪಾಲಕೃಷ್ಣ, ಶಾಸಕ
ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ರಥೋತ್ಸವ ಸಮಿತಿ ಪ್ರಧಾನ ಸಂಚಾಲಕ ಟಿ.ವಿ.ಪಾಂಡುರಂಗ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ವಿವಾದಿತ ಬೇಲಿ ತೆರವು, ಅಂಗಡಿ ಮುಂಗಟ್ಟು ಬಂದ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200