ಶಿವಮೊಗ್ಗ ಲೈವ್.ಕಾಂ | 1 ಜನವರಿ 2019
ಯುವಕರಲ್ಲಿ ಗಾಂಜಾ ಮತ್ತು ಡ್ರಗ್ಸ್ ಸೇವನೆ ವ್ಯಾಪಕವಾಗುತ್ತಿದೆ. ವ್ಯಸನದ ಕುರಿತು ಮೃದು ಧೋರಣೆಯಿಂದ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಕಠಿಣ ಕ್ರಮ ಕೈಗೊಳ್ಳಬೇಕಿದೆ. ಈ ಸಂಬಂಧ ಜ.10ರಂದು ಜಿಲ್ಲಾ ರಕ್ಷಣಾಧಿಕಾರಿ, ಎಸಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದ್ದಾರೆ.
ಗಾಂಜಾ ಸೇವನೆ ಹೆಚ್ಚುತ್ತಿರುವ ಹಿನ್ನಲೆ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಹರತಾಳು ಹಾಲಪ್ಪ, ಶಿಘ್ರದಲ್ಲೇ ನಗರ ಮತ್ತು ಗ್ರಾಮೀಣ ಭಾಗದ ಕಾಲೇಜುಗಳ ಮುಖ್ಯಸ್ಥರ ಸಭೆ ಕರೆದು ಮುಂಜಾಗ್ರತಾ ಕ್ರಮದ ಕುರಿತು ಮಾಹಿತಿ ನೀಡಲಾಗುತ್ತದೆ ಎಂದರು. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]