ಶಿವಮೊಗ್ಗ ಲೈವ್.ಕಾಂ | SHIMOGA | 4 ಏಪ್ರಿಲ್ 2020
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಸಾಗರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಎಸ್ಕೇಪ್ ಆಗಿದ್ದಾನೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಉಳುವಿಯಿಂದ ಸಾಗರದ ಕಡೆಗೆ ಬೈಕ್’ನಲ್ಲಿ ತೆರೆಳುತ್ತಿದ್ದ ಇಬ್ಬರ ಮೇಲೆ ದಾಳಿ ನಡೆಸಿ, ಒಂದು ಕೆ.ಜಿ. ನೂರು ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಸೊರಬ ತಾಲೂಕಿನ ಉಳವಿ ಗ್ರಾಮದ ಜನತಾ ಕಾಲೋನಿ ನಿವಾಸಿ ತಾಹಿರ್ ಅಹ್ಮದ್ (26)ನನ್ನು ಪೊಲೀಸರು ಬಂಧಿಸಿದ್ದಾರೆ.
ಎಸ್ಕೇಪ್ ಆದ ಮತ್ತೊಬ್ಬ ಆರೋಪಿ
ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಆರೋಪಿ ಎಸ್ಕೇಪ್ ಆಗಿದ್ದಾನೆ. ಆತನನ್ನು ಶೌಕತ್ ಅಲಿ (68) ಎಂದು ತಿಳಿದು ಬಂದಿದೆ. ಈತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇವರಿಂದ ಒಂದು ಕೆ.ಜಿ. ನೂರು ಗ್ರಾಂ ಒಣ ಗಾಂಜಾ, ಕೃತ್ಯಕ್ಕೆ ಬಳಿಸಿದ ಬೈಕನ್ನು ವಶಕ್ಕೆ ಪಡೆಯಲಾಗಿದೆ. ಶೌಕತ್ ಅಲಿ ಮತ್ತು ತಾಹಿರ್ ಅಹ್ಮದ್ ಅಪ್ಪ, ಮಗ ಎಂದು ತಿಳಿದು ಬಂದಿದೆ.
ಸಾಗರ ಗ್ರಾಮಾಂತರ ಠಾಣೆ ಸಬ್’ಇನ್ಸ್’ಪೆಕ್ಟರ್ ಭರತ್ ಕುಮಾರ್, ಎಎಸ್ಐ ಸಿದ್ದರಾಮಪ್ಪ, ಸಿಬ್ಬಂದಿ ಫೈರೋಜ್ ಅಹ್ಮದ್, ತಾರಾನಾಥ್, ಗಿರೀಶ್ ಬಾಬು, ಪ್ರಕಾಶ್ ಅಂಬ್ಲಿ, ರವಿಕುಮಾರ್, ಅಶೋಕ್, ರಘು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]