ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 28 ಜನವರಿ 2020
ಬಾವಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಸಾಗರದ ತಿಲಕ ರಸ್ತೆಯ ಮನೆಯೊಂದರ ಕಾಂಪೌಂಡ್’ನಲ್ಲಿರುವ ಬಾವಿಯಲ್ಲಿ, ಯುವತಿಯ ಮೃತದೇಹ ಪತ್ತೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೃತಳನ್ನು ಸುಚಿತ್ರಾ ಶೆಟ್ಟಿ (25) ಎಂದು ಗುರುತಿಸಲಾಗಿದೆ. ತಿಲಕ ನಗರದ ಆಭರಣದ ಅಂಗಡಿಯೊಂದರಲ್ಲಿ ಸುಚಿತ್ರಾ ಶೆಟ್ಟಿ ಕೆಲಸ ಮಾಡುತ್ತಿದ್ದಳು. ಸೋಮವಾರ ಕೆಲಸ ಮುಗಿಸಿ ಅಂಗಡಿಯಿಂದ ತೆರಳಿದ್ದ ಈಕೆ ಮನೆಗೆ ತಲುಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದರು.
ಇವತ್ತು ಬೆಳಗ್ಗೆ ಬಾವಿಯೊಳಗೆ ಸುಚಿತ್ರಾ ಶೆಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬಾವಿಯ ಮೇಲೆ ಹಾಕಲಾಗಿದ್ದ ಗ್ರಿಲ್’ಗಳಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹವಿತ್ತು.
ಯುವತಿಯೊಬ್ಬಳ ಮೃತದೇಹ ಪತ್ತೆ ಆಗಿರುವ ವಿಚಾರ ತಿಳಿಯುತ್ತಿದ್ದಂತೆ ಮನೆ ಬಳಿ, ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಪೊಲೀಸರು ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿ, ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]