ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ನಗರದ ಮಾರ್ಕೆಟ್ ರಸ್ತೆಯಲ್ಲಿ ಬಂಗಾರದ ಆಭರಣ (Gold) ಸಿದ್ಧಪಡಿಸುವ ಉದ್ಯಮ ನಡೆಸುತ್ತಿದ್ದ ನಿತಿನ್ ಶೇಟ್ (34) ಅವರು ಸೋಮವಾರ ಬೆಳಿಗ್ಗೆ ತಾಲೂಕಿನ ಎಡಜಿಗಳೇಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರದಪುರದ ಸಮೀಪದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಭಾನುವಾರ ಮಧ್ಯಾಹ್ನ ವರದಪುರದ ಶ್ರೀಧರಾಶ್ರಮಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದರು. ನಂತರ ಅವರ ಬೈಕ್ ಜಿಗಳೇಮನೆ ಮುಖ್ಯ ರಸ್ತೆಯ ಪಕ್ಕದಲ್ಲಿ ಪತ್ತೆಯಾಗಿದೆ. ರಾತ್ರಿ ಸ್ಥಳೀಯರು ಅವರಿಗಾಗಿ ಹುಡುಕಾಡಿದರೂ ಸುಳಿವು ಸಿಕ್ಕಿರಲಿಲ್ಲ. ಆದರೆ ಸೋಮವಾರ ಬೆಳಿಗ್ಗೆ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸದ್ಯ ನಿತಿನ್ ಸಾವಿನ ಹಿಂದಿನ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ

LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು





