ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಅರ್ಧ ಮಾಂಗಲ್ಯ ಸರ ಅಪಹರಣ, ಘಟನೆ ಸಂಭವಿಸಿದ್ದು ಹೇಗೆ?

SHIVAMOGGA LIVE NEWS | 18 APRIL 2024➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SAGARA : ನಡೆದು ಹೋಗುತ್ತಿದ್ದ ವೃದ್ಧೆಯೊಬ್ಬರ ಬಳಿ ಬೈಕ್‌ನಲ್ಲಿ ಬಂದ ಅಪರಿಚಿತರು ವಿಳಾಸ ಕೇಳುವಂತೆ ನಟಿಸಿ ಮಾಂಗಲ್ಯ ಸರ ಅಪಹರಿಸಿದ್ದಾರೆ. ಸಾಗರದ ಅಣಲೆಕೊಪ್ಪ ಬಡಾವಣೆಯ ರಾಬಿಯಾ ಮಸೀದಿ ಬಳಿ ಘಟನೆ ನಡೆದಿದೆ.

ಅಪರಿಚಿತರು ಶಿರವಾಳ ಗ್ರಾಮದ ಕಡೆಯಿಂದ ಬೈಕ್‌ನಲ್ಲಿ ಬಂದಿದ್ದರು. ವಿಳಾಸ ಕೇಳುವ ನೆಪದಲ್ಲಿ ಶಾಂತಮ್ಮ ಎಂಬುವರ ಮಾಂಗಲ್ಯ ಸರ ಕೀಳಲು ಮುಂದಾಗಿದ್ದಾರೆ. ಶಾಂತಮ್ಮ ಪ್ರತಿರೋಧ ವ್ಯಕ್ತಪಡಿಸಿದಾಗ 40 ಗ್ರಾಂ ತೂಕದ ಮಾಂಗಲ್ಯ ಸರದ ಪೈಕಿ 23 ಗ್ರಾಂ ಸರದ ತುಂಡನ್ನು ಕಳ್ಳರು ಎಗರಿಸಿದ್ದಾರೆ. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಸಾಗರದಲ್ಲಿ ಆಟವಾಡುತ್ತ ಆಯಾತಪ್ಪಿ ಬಾವಿಗೆ ಬಿದ್ದ ಮಗು, ಸಾವು

Leave a Comment