NEWS HIGHLIGHTS
ಸಾಗರ: ಜೂನ್ 23 ಅಥವಾ 24ರಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಶೇ 100ರಷ್ಟು ಭರವಸೆ ಇದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಮಲೆನಾಡು ಭಾಗಕ್ಕೆ ಅರಣ್ಯ ಖಾತೆ ನೀಡುವಂತೆ ಆಗ್ರಹಿಸಲಾಗಿದೆ. ಯಾವುದೇ ಖಾತೆ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವುದಾಗಿ ತಿಳಿಸಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತವಾಗಿದ್ದು, ಅಡ್ಡಮತದಾನ ತಡೆಯಲು ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ಯುವುದರಲ್ಲಿ ತಪ್ಪಿಲ್ಲ ಎಂದರು.

ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪರಿಷ್ಕರಣೆ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಉದ್ದೇಶದಿಂದ ಪ್ರಕ್ರಿಯೆ ನಡೆಯುತ್ತಿದೆ. ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ರದ್ದುಪಡಿಸುವುದಿಲ್ಲ
– ಬೇಳೂರು ಗೋಪಾಲಕೃಷ್ಣ, ಶಾಸಕ