ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 NOVEMBER 2023
SAGARA : ಆವಿನಹಳ್ಳಿ ರಾಜಸ್ವ ನಿರೀಕ್ಷಕ ಗೌರೀಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಕರ್ತವ್ಯಕ್ಕೆ ಗೈರಾಗಿ ಹೋರಾಟ ನಡೆಸಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘ ಮತ್ತು ಕಂದಾಯ ಇಲಾಖೆ ನೌಕರರ ಸಂಘ ಎಚ್ಚರಿಕೆ ನೀಡಿದೆ.
ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ನೌಕರರು, ನವೆಂಬರ್ 6ರಂದು ಗೌರೀಶ್ ಅವರು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಲೋಹಿತ್ ಎಂಬಾತ ಏಕಾಏಕಿ ಬಂದು ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿದ್ದಾನೆ. ಆತನನ್ನು ಕೂಡಲೆ ಬಂಧಿಸಬೇಕು ಎಂದು ನೌಕರರು ಆಗ್ರಹಿಸಿದರು.
ಇದನ್ನೂ ಓದಿ – ಷಡಾಕ್ಷರಿ ವರ್ಗಾವಣೆ, ನೌಕರರ ವಲಯದಲ್ಲಿ ತೀವ್ರ ಚರ್ಚೆ, ಸಂಸದರಿಂದ ಕಟು ಟೀಕೆ
24 ಗಂಟೆಯೊಳಗೆ ಆರೋಪಿಯ ಬಂಧನವಾಗದಿದ್ದರೆ ಕರ್ತವ್ಯಕ್ಕೆ ಗೈರಾಗಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುತ್ತದೆ ಎಂದು ನೌಕರರು ಎಚ್ಚರಿಸಿದ್ದಾರೆ.
ಇದನ್ನೂ ಓದಿ – ರಾತ್ರೋರಾತ್ರಿ ಸ್ನೇಹಿತನ ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್ 220 ಬೈಕ್ ನಾಪತ್ತೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422