ಗುದ್ದಲಿ ಪೂಜೆಗೆ ಅಧ್ಯಕ್ಷೆ, ಸದಸ್ಯರಿಗಿಲ್ಲ ಆಹ್ವಾನ, ಪಿಡಿಒ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಪವಾಸ ಸತ್ಯಾಗ್ರಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SAGARA | ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ಆಹ್ವಾನ ನೀಡದೆ ಪಿಡಿಒ ಶಿಷ್ಟಾಚಾರ (PROTOCOL) ಉಲ್ಲಂಘನೆ ಮಾಡಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಡಕಲಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ನಾಡಕಲಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ತಾಲೂಕು ಪಂಚಾಯಿತಿ ಇಒ ಪುಷ್ಪಾ ಆರ್.ಕಮ್ಮಾರ್ ಅವರಿಗೆ ದೂರು ನೀಡಿದರು.

(PROTOCOL)

ಏನಿದು ಪ್ರಕರಣ?

ಅ.14ರಂದು ನಾಡಕಲಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೋಡಿ ಎಸ್.ಟಿ. ಕಾಲೋನಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಲಾಯಿತು. ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಮತ್ತು ಸದಸ್ಯರಿಗೆ ಆಹ್ವಾನ ನೀಡಿರಲಿಲ್ಲ ಎಂದು ಆರೊಪಿಸಲಾಗಿದೆ. ಈ ಮೂಲಕ ಪಿಡಿಒ ಅವರು ಶಿಷ್ಟಾಚಾರ (PROTOCOL) ಉಲ್ಲಂಘನೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದರೆ ಉಡಾಫೆಯ ಉತ್ತರ ನೀಡುತ್ತಿದ್ದಾರೆ ಎಂದು ರತ್ನಮ್ಮ ಆರೋಪಿಸಿದ್ದಾರೆ.

ನಾನು ದಲಿತ ಮಹಿಳೆ ಎನ್ನುವ ಕಾರಣಕ್ಕೆ ಪಿಡಿಒ ಅವರು ಅವಮಾನ ಮಾಡುತ್ತಿದ್ದಾರೆ. ತಕ್ಷಣ ಪಿಡಿಒ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ.ರತ್ನಮ್ಮ, ನಾಡಕಲಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ

ಗ್ರಾಮ ಪಂಚಾಯಿತಿ ಸದಸ್ಯರಾದ ಮಹಾಬಲೇಶ್ ಕೌತಿ, ಸಂತೋಷ್ ಮರಸ, ಸವಿತಾ ನಾಗರಾಜ್, ದಲಿತ ಸಂಘರ್ಷ ಸಮಿತಿಯ ರೇವಪ್ಪ ಹೊಸಕೊಪ್ಪ, ಬಂಗಾರಪ್ಪ ಶುಂಠಿಕೊಪ್ಪ, ಶೇಖರ ಬಾಳಗೋಡು, ನಟರಾಜ್ ಗೇರುಬೀಸು ಸೇರಿದಂತೆ ಹಲವರು ಇದ್ದರು.

jnnce college shimoga

ಕ್ಲಿಕ್ ಮಾಡಿ ಇದನ್ನೂ ಓದಿ ‘ಸೌದಿ ದೇಶದಲ್ಲಿ ಕೆಲಸ’, ನಂಬಿ ಮೆಸೇಜ್ ಮಾಡಿದ ಹೊಸನಗರದ ವ್ಯಕ್ತಿಗೆ ಲಕ್ಷ ಲಕ್ಷ ಮೋಸ, ಹೇಗಾಯ್ತು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment