ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SAGARA NEWS | 26 DECEMBER 2020
ಅಡಕೆ ಕುರಿತು ಸಂಶೋಧನೆಗೆ ಕೇಂದ್ರ ಸರ್ಕಾರದಿಂದಲೇ ಆದೇಶ ಹೊರಡಿಸುವಂತಾಗಲು ಅಗತ್ಯ ಪ್ರಯತ್ನ ನಡೆಸಲಾಗುತ್ತದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಪ್ಪ, ಅಡಕೆ ಹಾನಿಕಾರಕ ಎಂಬ ಹಬ್ಬಿಸಲಾಗಿದೆ. ಈ ಕುರಿತು ಸಂಶೋಧನೆ ನಡೆಸಬೇಕಿದೆ. ಕೇಂದ್ರ ಸರ್ಕಾರವೇ ಸಂಶೋಧನೆಗೆ ಆದೇಶಿಸಿದರೆ ಅನುಕೂಲ. ಈ ಆದೇಶ ಹೊರಡಿಸಲು ಸಿಎಂ ಜೊತೆ ಚರ್ಚಿಸಲಾಗುತ್ತದೆ ಎಂದರು.
ಮಲೆನಾಡ ಸಮಸ್ಯೆಗಳ ಕುರಿತು ಚರ್ಚೆ
ಜನವರಿ 2 ಮತ್ತು 3ರಂದು ಶಿವಮೊಗ್ಗದಲ್ಲಿ ರಾಜ್ಯ ಕಾರ್ಯಕರಿಣಿ ವಿಶೇಷ ಸಭೆ ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎರಡು ದಿನ ಶಿವಮೊಗ್ಗದಲ್ಲಿ ಇರಲಿದ್ದಾರೆ. ಅವರೊಂದಿಗೆ ಅಡಕೆ ಬೆಳೆಗಾರರ ಸಮಸ್ಯೆ, ಬಗರ್ ಹುಕುಂ ಸಮಸ್ಯೆ, ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವ ವಿಚಾರ ಸೇರಿದಂತೆ ಮಲೆನಾಡಿನ ಜನರ ಸಮಸ್ಯೆ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಹಾಲಪ್ಪ ತಿಳಿಸಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಗಣೇಶ್ ಪ್ರಸಾದ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ಮಹೇಶ್, ಪ್ರಮುಖರಾದ ಸತೀಶ್ ಮೊಗವೀರ, ಗೌತಮ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200