ಅಡಕೆ ಕುರಿತು ಸಂಶೋಧನೆಗೆ ಕೇಂದ್ರ ಸರ್ಕಾರದಿಂದ ಆದೇಶಕ್ಕೆ ಪ್ರಯತ್ನ, ಸಿಎಂ ಜೊತೆಗೆ ಚರ್ಚೆ ಸಿದ್ಧತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SAGARA NEWS | 26 DECEMBER 2020

ಅಡಕೆ ಕುರಿತು ಸಂಶೋಧನೆಗೆ ಕೇಂದ್ರ ಸರ್ಕಾರದಿಂದಲೇ ಆದೇಶ ಹೊರಡಿಸುವಂತಾಗಲು ಅಗತ್ಯ ಪ್ರಯತ್ನ ನಡೆಸಲಾಗುತ್ತದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಪ್ಪ, ಅಡಕೆ ಹಾನಿಕಾರಕ ಎಂಬ ಹಬ್ಬಿಸಲಾಗಿದೆ. ಈ ಕುರಿತು ಸಂಶೋಧನೆ ನಡೆಸಬೇಕಿದೆ. ಕೇಂದ್ರ ಸರ್ಕಾರವೇ ಸಂಶೋಧನೆಗೆ ಆದೇಶಿಸಿದರೆ ಅನುಕೂಲ. ಈ ಆದೇಶ ಹೊರಡಿಸಲು ಸಿಎಂ ಜೊತೆ ಚರ್ಚಿಸಲಾಗುತ್ತದೆ ಎಂದರು.

ಮಲೆನಾಡ ಸಮಸ್ಯೆಗಳ ಕುರಿತು ಚರ್ಚೆ

ಜನವರಿ 2 ಮತ್ತು 3ರಂದು ಶಿವಮೊಗ್ಗದಲ್ಲಿ ರಾಜ್ಯ ಕಾರ್ಯಕರಿಣಿ ವಿಶೇಷ ಸಭೆ ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎರಡು ದಿನ ಶಿವಮೊಗ್ಗದಲ್ಲಿ ಇರಲಿದ್ದಾರೆ. ಅವರೊಂದಿಗೆ ಅಡಕೆ ಬೆಳೆಗಾರರ ಸಮಸ್ಯೆ, ಬಗರ್‍ ಹುಕುಂ ಸಮಸ್ಯೆ, ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವ ವಿಚಾರ ಸೇರಿದಂತೆ ಮಲೆನಾಡಿನ ಜನರ ಸಮಸ್ಯೆ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಹಾಲಪ್ಪ ತಿಳಿಸಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಗಣೇಶ್ ಪ್ರಸಾದ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ಮಹೇಶ್, ಪ್ರಮುಖರಾದ ಸತೀಶ್ ಮೊಗವೀರ, ಗೌತಮ್ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2020

Leave a Comment