ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಗೆಲ್ಲದೆ ಇದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಅಂತಾ ಸಾಗರ ಶಾಸಕ ಹರತಾಳು ಹಾಲಪ್ಪ ಸವಾಲು ಹಾಕಿದ್ದಾರೆ. ಸಾಗರದ ಮಡಸೂರು ಲಿಂಗದಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಹಾಲಪ್ಪ, ಈ ಸವಾಲು ಹಾಕಿದ್ದಾರೆ.
ಈಡಿಗ ಸಮುದಾಯಕ್ಕೆ ಬಿಜೆಪಿಯಿಂದ ಎಂದಿಗೂ ಅನ್ಯಾಯವಾಗಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾರ್ಕಳದ ಕೋಟಿ ಚನ್ನಯ್ಯ ಪೀಠ ಸ್ಥಾಪನೆಗೆ 99 ಕೋಟಿ ರೂ. ನೀಡಿದ್ದರು. ಮಂಗಳೂರಿನಲ್ಲಿ ಜಮೀನು ನೀಡಿದ್ದಾರೆ. ಶಿವಮೊಗ್ಗದಲ್ಲಿ ಈಡಿಗ ಸಭಾಭವನ ನಿರ್ಮಾಣಕ್ಕೆ ಜಾಗದ ಜೊತೆಗೆ ಮೂರು ಕೋಟಿ ರೂ. ಅನುದಾನವನ್ನೂ ನೀಡಿದ್ದಾರೆ. ಅಲ್ಲದೇ, ಬಿಜೆಪಿಯ ಆರು ಶಾಸಕರು ಈಡಿಗ ಸಮುದಾಯಕ್ಕೆ ಸೇರಿದವರಾಗಿದ್ದಾರ ಎಂದರು.
ತುಮರಿ ಸೇತುವೆ ರಾಜಕಿಯ ವಿಷಯವಲ್ಲ
ಸಭೆಯಲ್ಲಿ ಮಾತನಾಡಿದ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ತುಮರಿ ಸೇತುವೆ ರಾಜಕೀಯ ವಿಷಯವಲ್ಲ. ಸೇತುವೆ ನಿರ್ಮಾಣಕ್ಕೆ ಗ್ಲೋಬಲ್ ಟೆಂಡರ್ ಕರೆಯಲಾಗಿದೆ. 450 ಕೋಟಿ ರೂ. ವೆಚ್ಚದಲ್ಲಿ ಭಾರತದ ಏಳನೇ ಅತಿ ಉದ್ದ ಮತ್ತು ಎತ್ತರದ ಸೇತುವೆ ಎಂಬ ಹೆಗ್ಗಳಿಕೆ ಪಡೆಯಲಿದೆ. ಇನ್ನು 30 ತಿಂಗಳಲ್ಲಿ ಸೇತುವೆ ನಿರ್ಮಾಣವಾಗಲಿದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494ಈ ಮೇಲ್ | shivamoggalive@gmail.com

LATEST NEWS
- ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು











