ಸಾಗರ ಜಿಲ್ಲಾ ಕೇಂದ್ರ ವಿಚಾರ, ಡಿಸೆಂಬರ್‌ 31ರ ಒಳಗೆ ಪ್ರಸ್ತಾವನೆಗೆ ಹಾಲಪ್ಪ ಆಗ್ರಹ, ಕಾರಣವೇನು?

 ಶಿವಮೊಗ್ಗ  LIVE 

ಸಾಗರ: ಸಾಗರಕ್ಕೆ ಜಿಲ್ಲಾ ಕೇಂದ್ರದ ಮಾನ್ಯತೆ ನೀಡಬೇಕೆಂಬ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಲ್ಲಿ ನಿರಂತರವಾಗಿ ಹೋರಾಟ ನಡೆಯುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರ ಡಿಸೆಂಬರ್‌ 31ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ (proposal) ಕಳುಹಿಸಬೇಕು. ಇಲ್ಲವಾದಲ್ಲಿ ಮುಂದಿನ 18 ತಿಂಗಳಲ್ಲಿ ಈ ವಿಷಯ ನನೆಗುದಿಗೆ ಬೀಳುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದ್ದಾರೆ.

Former-Minister-Haratalu-Halappa-BJP

ನೂತನ ಜಿಲ್ಲೆಗಳ ರಚನೆ ಸಂಬಂಧ ಡಿ. 31ರೊಳಗೆ ಪ್ರಸ್ತಾವನೆ ಕಳುಹಿಸುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಹಾಗಾಗಿ ಸಾಗರವನ್ನು ಜಿಲ್ಲಾ ಕೇಂದ್ರ ಮಾಡುವ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ನಿರ್ಣಯ ತೆಗೆದುಕೊಂಡು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ » ರಾಘವೇಂದ್ರ, ವಿಜಯೇಂದ್ರ ನೇತೃತ್ವದಲ್ಲಿ ಮೆರವಣಿಗೆ, ಕಾಯ್ದೆ ವಿರುದ್ಧ ಪ್ರತಿಭಟನೆ

ಸಾಗರ ಉಪವಿಭಾಗೀಯ ಕೇಂದ್ರ ಆಗಿರುವುದರಿಂದ ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿದೆ. ಹೊಸನಗರ, ಸೊರಬ ಹಾಗೂ ಸುತ್ತಮುತ್ತಲ ಪ್ರದೇಶಗಳನ್ನು ಸೇರಿಸಿಕೊಂಡು ಮಲೆನಾಡು ಜಿಲ್ಲೆ ಮಾಡುವ ಸಂಬಂಧ ಕೂಡಲೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment