ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 APRIL 2023
SAGARA : ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಅವರು ಇವತ್ತು ನಾಮಪತ್ರ ಸಲ್ಲಿಸಿದರು. ದೊಡ್ಡ ಸಂಖ್ಯೆಯ ಅಭಿಮಾನಿಗಳು, ಬೆಂಬಲಿಗರ ಜೊತೆಗೆ ಮೆರವಣಿಗೆ ನಡೆಸಿದ ಹಾಲಪ್ಪ ಅವರು, ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ (Nomination) ಸಲ್ಲಿಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಪತ್ನಿ ಯಶೋಧ, ಈಚೆಗಷ್ಟೆ ಬಿಜೆಪಿ ಸೇರ್ಪಡೆಯಾದ ಡಾ. ರಾಜನಂದಿನಿ ಕಾಗೋಡು, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ರಾಜೇಶ್ ಕೀಳಂಬಿ ಅವರೊಂದಿಗೆ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ (Nomination) ಸಲ್ಲಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹುಟ್ಟೂರು, ಸಾಗರದಲ್ಲಿ ಪೂಜೆ
ನಾಮಪತ್ರ ಸಲಿಕೆಗೆ ಮೊದಲು ಹುಟ್ಟೂರು ಸೊರಬದ ಹೊಳೆಕೊಪ್ಪ ಗ್ರಾಮದ ಧನಾಂಜಿನಯ ಸ್ವಾಮಿ ದೇವಸ್ಥಾನದಲ್ಲಿ ಹರತಾಳು ಹಾಲಪ್ಪ ಅವರು ಪೂಜೆ ಸಲ್ಲಿಸಿದರು. ಬಳಿಕ ಸಾಗರದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಬೆಂಬಲಿಗರು, ಅಭಿಮಾನಿಗಳು, ಬಿಜೆಪಿ ಮುಖಂಡರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು.
ಮೋದಿ, ಹಾಲಪ್ಪ ಪರ ಘೋಷಣೆ
ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಹಾದಿ ಉದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ, ಶಾಸಕ ಹರತಾಳು ಹಾಲಪ್ಪ ಅವರ ಪರವಾಗಿ ಘೋಷಣೆ ಕೂಗಿ, ನೃತ್ಯ ಮಾಡಿದರು. ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.
ಇದನ್ನೂ ಓದಿ – ನಾಮಪತ್ರ ಸಲ್ಲಿಕೆ ಮೊದಲ ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ನಾಮಪತ್ರ
ಗಮನ ಸೆಳೆದ ರಾಜನಂದಿನಿ
ಇನ್ನು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಅವರು ಮೆರವಣಿಗೆಯಲ್ಲಿ ಗಮನ ಸೆಳೆದರು. ಈಚೆಗಷ್ಟೆ ಬಿಜೆಪಿ ಸೇರ್ಪಡೆಯಾಗಿದ್ದ ಡಾ.ರಾಜನಂದಿನಿ ಅವರು ಇವತ್ತು ಹರತಾಳು ಹಾಲಪ್ಪ ಅವರ ಪಕ್ಕದಲ್ಲಿ ಇದ್ದರು. ತೆರದ ವಾಹನದಲ್ಲಿನ ಮೆರವಣಿಗೆ ವೇಳೆ ಡಾ.ರಾಜನಂದಿ ಅವರು ಜನರು, ಬಿಜೆಪಿ ಕಾರ್ಯಕರ್ತರತ್ತ ಕೈ ಬೀಸಿದರು.