ಶಿವಮೊಗ್ಗ ಲೈವ್.ಕಾಂ | SAGARA NEWS | 8 ಸೆಪ್ಟಂಬರ್ 2020
ಕೆಲವು ದಿನದ ಹಿಂದೆಯಷ್ಟೆ ಕರೋನದಿಂದ ಗುಣವಾಗಿ ಸಾಗರಕ್ಕೆ ಮರಳಿದ್ದ ಶಾಸಕ ಹರತಾಳು ಹಾಲಪ್ಪ ಅವರ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದಿದೆ. ಹಾಗಾಗಿ ಅವರು ಬೆಂಗಳೂರಿಗೆ ತೆರಳಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೋವಿಡ್‍ಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಹರತಾಳು ಹಾಲಪ್ಪ ಅವರಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದರು. ಆದರೆ ಹಾಲಪ್ಪ ಅವರು ಕ್ಷೇತ್ರದ ವಿವಿಧೆಡೆ ಸಂಚರಿಸಿ, ಪರಿಶೀಲನೆ ನಡೆಸಿದ್ದರು.
ಊಟದಲ್ಲಿ ವ್ಯತ್ಯಾಸವಾದ ಹಿನ್ನೆಲೆ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸೋಮವಾರ ಹಾಲಪ್ಪ ಅವರು ಬೆಂಗಳೂರಿಗೆ ತೆರಳಿ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]