ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 1 MARCH 2021
ಬಸ್ ಸಂಚಾರ ಆರಂಭಿಸಲು ಇನ್ನೂ ಹತ್ತು ದಿನ ಬೇಕು ಎಂದು ತಿಳಿಸಿದ ಸಾರಿಗೆ ಇಲಾಖೆ ಅಧಿಕಾರಿಗಳಿಗೆ, ಸಾಗರ ಶಾಸಕ ಹರತಾಳು ಹಾಲಪ್ಪ ಇವತ್ತು ಕ್ಲಾಸ್ ತೆಗೆದುಕೊಂಡಿದ್ದಾರೆ. ಸಾರಿಗೆ ಸಚಿವರಿಗೆ ಕರೆ ಮಾಡಿ, ತಕ್ಷಣ ಬಸ್ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಏನಿದು ಕೇಸ್? ಅಧಿಕಾರಿಗಳಿಗೆ ಕ್ಲಾಸ್ ಏಕೆ?
ಸಾಗರ ತಾಲೂಕು ಕಟ್ಟಿನಕಾರು ಭಾಗಕ್ಕೆ ಬಸ್ ಸಂಚಾರ ಆರಂಭಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆಗೆ ಶಾಸಕ ಹರತಾಳು ಹಾಲಪ್ಪ ಚರ್ಚಿಸಿದ್ದರು. ಮಾರ್ಚ್ 1ರಿಂದ ಬಸ್ ಸಂಚಾರ ಆರಂಭಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಇವತ್ತು ಬಸ್ ಸಂಚಾರ ಆರಂಭಕ್ಕೆ ಇನ್ನೂ ಹತ್ತು ದಿನ ಬೇಕಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದು ಶಾಸಕ ಹಾಲಪ್ಪ ಅವರನ್ನು ಕೆರಳಿಸಿತು.
ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ
ವಿಚಾರ ತಿಳಿಯುತ್ತಿದ್ದಂತೆ ಶಾಸಕ ಹಾಲಪ್ಪ ಅವರು ಸರ್ಕಾರಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದರು. ಕಟ್ಟಿನಕಾರು ಭಾಗಕ್ಕೆ ಬಸ್ ಸಂಚಾರ ಆರಂಭವಾಗಿದೆಯೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ವಿದ್ಯಾರ್ಥಿಗಳು, ಸಾರ್ವಜನಿಕರ ಅನುಕೂಲಕ್ಕಾಗಿ ಬಸ್ ಸಂಚಾರ ಆರಂಭವಾಗಬೇಕು. ವಿಳಂಬ ನೀತಿ ಸರಿಯಲ್ಲ ಎಂದು ಕ್ಲಾಸ್ ತೆಗೆದುಕೊಂಡರು.
ಸಾರಿಗೆ ಸಚಿವರಿಗೆ ಫೋನ್
ಇಷ್ಟಕ್ಕೆ ಸುಮ್ಮನಾಗದ ಶಾಸಕ ಹರತಾಳು ಹಾಲಪ್ಪ, ಸಾರಿಗೆ ಸಚಿವರಿಗೆ ಕರೆ ಮಾಡಿ, ವಿಷಯ ತಿಳಿಸಿದರು. ಕೂಡಲೆ ಬಸ್ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಶುರುವಾಯ್ತು ಬಸ್ ಸೇವೆ
ಕೆಲವೇ ನಿಮಿಷದಲ್ಲಿ ಕಟ್ಟಿನಕಾರು ಭಾಗಕ್ಕೆ ಬಸ್ ಸೇವೆ ಆರಂಭಿಸಲಾಯಿತು. ಶಾಸಕ ಹಾಲಪ್ಪ ಅವರೆ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು. ಯಾವುದೆ ಕಾರಣಕ್ಕೂ ಆ ಭಾಗದ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ತೊಂದರೆ ಆಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422