ಶಿವಮೊಗ್ಗ ಲೈವ್.ಕಾಂ | SAGARA NEWS | 10 FEBRUARY 2021
ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ದಿಢೀರ್ ಭೇಟಿ ನೀಡಿ, ಬಹು ಹೊತ್ತು ಚರ್ಚೆ ನಡೆಸಿದರು. ರೇವಣ್ಣ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ
ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿದ್ದ ಹೆಚ್.ಡಿ.ರೇವಣ್ಣ, ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದರು. ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಔಪಚಾರಿಕ ಭೇಟಿ ಅಷ್ಟೆ
ಕಾಗೋಡು ತಿಮ್ಮಪ್ಪ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಇದು ಔಪಚಾರಿಕ ಭೇಟಿ. ರಾಜಕೀಯ ವಿಚಾರಗಳು ಚರ್ಚೆಯಾಗಿಲ್ಲ. ಹರಿಹರದ ವಾಲ್ಮೀಕಿ ಸಮುದಾಯದ ಸಮಾವೇಶದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದೆ. ಶಿಕಾರಿಪುರದಲ್ಲಿರುವ ನಮ್ಮ ದೇವಸ್ಥಾನ ನಿರ್ಮಾಣ ಮಾಡಿದ ಕುಶಲಕರ್ಮಿಯೊಬ್ಬರ ಮನೆಗೆ ಭೇಟಿ ನೀಡಿದ್ದೆ. ಹಾಗೆ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ವಿಚಾರಿಸಲು ಬಂದಿದ್ದೇನೆ ಎಂದರು.
ಬಣ್ಣ ಬಣ್ಣದ ರಾಜಕಾರಣಕ್ಕೆ ಬೆಂಬಲ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಜನಪರ ಬದ್ಧತೆ ಇರುವ ರಾಜಕಾರಣಿಗಳು. ಆದರೆ ಈಗ ಬಣ್ಣ ಬಣ್ಣದ ಮಾತನಾಡುವ ರಾಜಕಾರಣಿಗಳಿಗೆ ಜನರು ಬೆಂಬಲ ನೀಡುತ್ತಿರುವುದು ಬೇಸರದ ಸಂಗತಿ ಎಂದರು.
ಜೆಡಿಎಸ್ ನಗರಸಭಾ ಸದಸ್ಯ ಜಾಕೀರ್, ಕನ್ನಪ್ಪ ಬೆಳಲಮಕ್ಕಿ, ಕಾಂಗ್ರೆಸ್ ಮುಖಂಡ ಡಿ.ದಿನೇಶ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
Photo | Jameel Sagar
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200