ಸಾಗರ: ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು (Head on) ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಹುಲಿಕಲ್, ಮಾಸ್ತಿಕಟ್ಟೆಯಲ್ಲಿ ಮಳೆಯೋ ಮಳೆ, ಹೊಸನಗರ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?
ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ಸು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತಿತ್ತು. ಟ್ರಕ್ ಆನಂದಪುರದಿಂದ ಸಾಗರ ಕಡೆಗೆ ಹೋಗುತಿತ್ತು. ಅಪಘಾತದಲ್ಲಿ ಹಲವರಿಗೆ ಗಾಯವಾಗಿದೆ. ಕೂಡಲೆ ಅವರನ್ನು ಆನಂದಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳೀಯರ ಮಾನವೀಯತೆ

ಕಚೇರಿ, ಶಾಲೆ, ಕಾಲೇಜು ಸಮಯವಾದ್ದರಿಂದ ಬಸ್ಸಿನಲ್ಲಿ ವಿದ್ಯಾರ್ಥಿಗಳು ಮತ್ತು ಕಚೇರಿಗೆ ತೆರಳುವವರೆ ಹೆಚ್ಚಿದ್ದರು ಎಂದು ತಿಳಿದು ಬಂದಿದೆ. ಅಪಘಾತವಾದ ಕೂಡಲೆ ಸ್ಥಳೀಯರು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ.
ಸಾಗರದ ಮರ್ಕಜ್ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಕೂಡಲೆ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳೀಯರು ತಕ್ಷಣ ನೆರವು ನೀಡಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇನ್ನು, ಅಪಘಾತದಿಂದ ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಹಾಗಾಗಿ ಹೆದ್ದಾರಿಯಲ್ಲಿ ಬಹು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





