JOG FALLS NEWS, 2 OCTOBER 2024 : ಜೋಗದ ರಾಣಿ ಫಾಲ್ಸ್ (Jog Falls) ಪ್ರದೇಶದಲ್ಲಿ ಹೃಸ್ತಿಕ್ ರೋಡ್ರಿಗಸ್ ಎಂಬುವರ ಮನೆಯನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಮಂಗಳವಾರ ಮನೆಯವರ ಪ್ರತಿರೋಧದ ನಡುವೆಯೂ ಕಾರ್ಯಾಚರಣೆ ಮೂಲಕ ತೆರವುಗೊಳಿಸಲಾಯಿತು. ಇಲ್ಲಿ ವಾಹನ ಪಾರ್ಕಿಂಗ್ಗೆ ವ್ಯವಸ್ಥೆ ಮಾಡುವ ಸಲುವಾಗಿ ಮನೆ ತೆರವು ಮಾಡಲಾಗಿದೆ.
ಈ ಹಿಂದೆ ಅವರು ಕಟ್ಟಿಕೊಂಡಿದ್ದ ಕೊಟ್ಟಿಗೆ ಮತ್ತು ಅಡಕೆ ತೋಟಗಳನ್ನು ತೆರವುಗೊಳಿಸಲಾಗಿತ್ತು. ಆಗ ಅವರಿಗೆ ಪರಿಹಾರ ರೂಪದಲ್ಲಿ ನಿಗಮದಿಂದ ವಾಸಕ್ಕೆ ಮನೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದಲ್ಲಿ ಪರಿಹಾರದ ಭರವಸೆ ನೀಡಲಾಗಿತ್ತು. ಆದರೆ, ಗಡುವು ಮೀರಿದರೂ ತಾವು ವಾಸಿಸುತ್ತಿರುವ ಮನೆ ತೆರವುಗೊಳಿಸುವುದಕ್ಕೆ ಕುಟುಂಬಸ್ಥರು ನಿರಾಕರಿಸಿದ್ದರು.
ಆನಿವಾರ್ಯವಾಗಿ ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಸಾಗರದ ಉಪ ವಿಭಾಗಾಧಿಕಾರಿ ಯತೀಶ್ ನೇತೃತ್ವದಲ್ಲಿ ಮನೆ ತೆರವುಗೊಳಿಸಲಾಯಿತು. ಈ ಸಂದರ್ಭ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಜೋಗ ಜಲಪಾತಕ್ಕೆ ಹೆಚ್ಚುತ್ತಿರುವ ಪ್ರವಾಸಿಗರ ವಾಹನ ದಟ್ಟಣೆಗೆ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆಗೆ ಈ ಮನೆ ಅಡ್ಡಿಯಾಗಿತ್ತು. ಸಾಕಷ್ಟು ಬಾರಿ ಸಂಧಾನ ನಡೆಸಿದರೂ ಸಹ ಮನೆಯವರು ಒಪ್ಪದಿದ್ದ ಕಾರಣ ಅನಿವಾರ್ಯವಾಗಿ ಕ್ರಮ ಕೈಗೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎಂ. ಕೆ. ಸುರೇಶ್, ಕಾರ್ಗಲ್ ಠಾಣೆ ಸಬ್ ಇನ್ಸ್ಪೆಕ್ಟರ್ ಹೊಳೆಬಸಪ್ಪ ಹೋಳಿ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ, ಯಾವಾಗ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200