ಹೆಂಡತಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಂದ ಗಂಡ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 20 JANUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

BYKODU : ಕೌಟುಂಬಿಕ ಕಲಹಕ್ಕೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಪತಿಯೇ ಪತ್ನಿಯ ಹತ್ಯೆಗೈದಿದ್ದಾನೆ. ಸಾಗರ ತಾಲೂಕು ಕರೂರು ಹೋಬಳಿಯ ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ನೀಲಾವತಿ (29) ಮೃತ ದುರ್ದೈವಿ. ಇಂದು ಬೆಳಗ್ಗೆ ಪತಿ ಲೋಕೇಶ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ನೀಲಾವತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನೀಲಾವತಿ ಕೊನೆಯುಸಿರೆಳೆದಿದ್ದಾರೆ.

ತವರು ಮನೆಗೆ ಹೋಗಿದ್ದ ಮಹಿಳೆ

ಕೌಟುಂಬಿಕ ಕಲಹದಿಂದ ಬೇಸತ್ತು ನೀಲಾವತಿ ತನ್ನ ಮೂರು ಹೆಣ್ಣು ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದರು. ಶನಿವಾರ ಬೆಳಗ್ಗೆ ಬಟ್ಟೆ ಕೊಂಡೊಯ್ಯಲು ಗಂಡನ ಮನೆಗೆ ವಾಪಾಸಾಗಿದ್ದರು. ಆ ಸಂದರ್ಭ ಲೋಕೇಶ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ರಕ್ತದ ಮಡುವಿನಲ್ಲಿದ್ದ ನೀಲಾವತಿ

ರಕ್ತದ ಮಡುವಿನಲ್ಲಿದ್ದ ನೀಲಾವತಿ ಅವರನ್ನು ಅಕ್ಕ-ಪಕ್ಕದ ಮನೆಯವರು ತುಮರಿಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಸ್ಥಳೀಯರು ತುರ್ತು ಲಾಂಚ್ ವ್ಯವಸ್ಥೆ ಮಾಡಿ 108 ಆಂಬುಲೆನ್ಸ್‌ ಮೂಲಕ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಗೃಹಿಣಿಗೆ ಅಪರಿಚಿತನಿಂದ ಮೆಸೇಜ್‌, ಫೋನ್‌, ಕೊನೆಗೆ ಕಾದಿತ್ತು ಶಾಕ್‌, ನೀವೂ ಆಗಬಹುದು ಮುಂದಿನ ಟಾರ್ಗೆಟ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment