ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
BYKODU : ಕೌಟುಂಬಿಕ ಕಲಹಕ್ಕೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಪತಿಯೇ ಪತ್ನಿಯ ಹತ್ಯೆಗೈದಿದ್ದಾನೆ. ಸಾಗರ ತಾಲೂಕು ಕರೂರು ಹೋಬಳಿಯ ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ನೀಲಾವತಿ (29) ಮೃತ ದುರ್ದೈವಿ. ಇಂದು ಬೆಳಗ್ಗೆ ಪತಿ ಲೋಕೇಶ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ನೀಲಾವತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನೀಲಾವತಿ ಕೊನೆಯುಸಿರೆಳೆದಿದ್ದಾರೆ.
ತವರು ಮನೆಗೆ ಹೋಗಿದ್ದ ಮಹಿಳೆ
ಕೌಟುಂಬಿಕ ಕಲಹದಿಂದ ಬೇಸತ್ತು ನೀಲಾವತಿ ತನ್ನ ಮೂರು ಹೆಣ್ಣು ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದರು. ಶನಿವಾರ ಬೆಳಗ್ಗೆ ಬಟ್ಟೆ ಕೊಂಡೊಯ್ಯಲು ಗಂಡನ ಮನೆಗೆ ವಾಪಾಸಾಗಿದ್ದರು. ಆ ಸಂದರ್ಭ ಲೋಕೇಶ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ರಕ್ತದ ಮಡುವಿನಲ್ಲಿದ್ದ ನೀಲಾವತಿ
ರಕ್ತದ ಮಡುವಿನಲ್ಲಿದ್ದ ನೀಲಾವತಿ ಅವರನ್ನು ಅಕ್ಕ-ಪಕ್ಕದ ಮನೆಯವರು ತುಮರಿಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಸ್ಥಳೀಯರು ತುರ್ತು ಲಾಂಚ್ ವ್ಯವಸ್ಥೆ ಮಾಡಿ 108 ಆಂಬುಲೆನ್ಸ್ ಮೂಲಕ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗೃಹಿಣಿಗೆ ಅಪರಿಚಿತನಿಂದ ಮೆಸೇಜ್, ಫೋನ್, ಕೊನೆಗೆ ಕಾದಿತ್ತು ಶಾಕ್, ನೀವೂ ಆಗಬಹುದು ಮುಂದಿನ ಟಾರ್ಗೆಟ್