ಪ್ರೀತ್ಸೆ ಪ್ರೀತ್ಸೆ ಅಂತಾ ಕಾಡಿದ, ಮದುವೆಯಾಗುವಂತೆ ಪೀಡಿಸಿದವನಿಗೆ 5 ವರ್ಷ ಜೈಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 APRIL 2024

SAGARA : ಮದುವೆಯಾಗುವಂತೆ ಒತ್ತಾಯಿಸಿ, ನಿರಾಕರಿಸಿದ್ದಕ್ಕೆ ಮಾನಸಿಕ ಕಿರುಕುಳ ನೀಡಿ ಯುವತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಭಟ್ಕಳ ತಾಲ್ಲೂಕಿನ ಮಾರುಕೇರಿ ಗ್ರಾಮದ ಓಂಕಾರ್ ಎಂಬಾತನಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಐದು ವರ್ಷ ಜೈಲು ಶಿಕ್ಷೆ, 7 ಸಾವಿರ ರೂ. ದಂಡ ವಿಧಿಸಿದೆ.

ಯುವತಿಯೊಬ್ಬಳ ಆತ್ಮಹತ್ಯೆ ಪ್ರಕರಣ ಸಂಬಂಧ, ಆಕೆಯ ತಂದೆ ದೂರು ನೀಡಿದ್ದರು. ತನಿಖೆ ನಡೆಸಿದ ರಿಪ್ಪನ್‌ಪೇಟೆ ಪೊಲೀಸರು ಓಂಕಾರ್ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಭಾವತಿ ಜಿ. ಅವರು, ಆರೋಪ ಸಾಬೀತಾದ ಹಿನ್ನೆಲೆ ಓಂಕಾರ್‌ಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯ್ಕ ವಾದಿಸಿದ್ದರು.

ಇನ್‌ಸ್ಟಾಗ್ರಾಂನಲ್ಲಿ ಪರಿಚಯ

ಭಟ್ಕಳದ ಓಂಕಾರ್‌ಗೆ ಇನ್‌ಸ್ಟಾಗ್ರಾಂನಲ್ಲಿ ಹೊಸನಗರದ ಯುವತಿಯ ಪರಿಚಯವಾಗಿತ್ತು. ಆಕೆಯ ಮೊಬೈಲ್ ನಂಬರ್‌ ಪಡೆದು, ಮದುವೆ ಆಗುವಂತೆ ಪೀಡಿಸುತ್ತಿದ್ದ. 2021ರ ಮಾರ್ಚ್ 12 ರಂದು ಆಕೆ ಓದುತ್ತಿದ್ದ ಕಾಲೇಜಿಗೆ ತೆರಳಿದ್ದ ಓಂಕಾರ್, ಆಕೆಯ ಕೈ ಹಿಡಿದು ಎಳೆದಾಡಿ ಮದುವೆಯಾಗುವಂತೆ ಒತ್ತಾಯಿಸಿದ್ದ. ಅಲ್ಲದೆ ತಂದೆ, ತಾಯಿಗೆ ವಿಷಯ ತಿಳಿಸುವುದಾಗಿ ಬೆದರಿಸಿದ್ದ.

ಕಳೆನಾಶಕ ಸೇವಿಸಿ ಆತ್ಮಹತ್ಯೆ

ಹೆದರಿದ ಯುವತಿ ಅದೇ ದಿನ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಳು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ 2021ರ ಮಾರ್ಚ್ 19 ರಂದು ಆಕೆ ಮೃತಪಟ್ಟಿದ್ದಳು. ಅಲ್ಲದೆ ತನ್ನ ಸಾವಿಗೆ ಓಂಕಾರ್‌ ಕಿರುಕುಳ ಕಾರಣ ಎಂದು ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಳು. ಯುವತಿ ಮೃತಪಟ್ಟ ಬಳಿಕ ಆಕೆಯ ತಂದೆ ಓಂಕಾರ್ ವಿರುದ್ಧ ದೂರು ನೀಡಿದ್ದರು. 

ಇದನ್ನೂ ಓದಿ – ಕಲ್ಯಾಣ ಮಂಟಪದಲ್ಲಿ ಗುರಾಯಿಸಿದ್ದಕ್ಕೆ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ, ಬಿಯರ್‌ ಬಾಟಲಿಯಿಂದ ಚುಚ್ಚಿ ಗಾಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 30, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment