ಕೊಟ್ಟಿಗೆಗೆ ಬೆಂಕಿ, ಕಾರು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 NOVEMBER 2023

BYKODU : ಕೊಟ್ಟಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿದೆ. ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡನವಳ್ಳಿಯ ಗಣಪತಿ ಎಂಬುವವರ ಅವರ ಕೊಟ್ಟಿಗೆಯಲ್ಲಿ ಘಟನೆ (Incident) ಸಂಭವಿಸಿದೆ.

ಹೇಗಾಯ್ತು ಘಟನೆ? ಏನೇನೆಲ್ಲ ನಷ್ಟವಾಗಿದೆ?

ಗಣಪತಿ ಅವರ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಟ್ಟದಲ್ಲಿ ಸಂಗ್ರಹಿಸಿ ಇಟ್ಟಿದ್ದ 200 ಪಿಂಡಿ ಹುಲ್ಲು, ತಾಮ್ರದ ಹಂಡೆ, ಲಕ್ಷಾಂತರ ಮೌಲ್ಯದ ನಾಟಾ, ಓಮ್ನಿ ಕಾರು, ಪೈಪ್‌, ಕಟ್ಟಿಗೆ ಸೇರಿದಂತೆ ಸುಮಾರು 6 ರಿಂದ 7 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಒಡ್ಡಿಕೊಪ್ಪ ಸಮೀಪ ವೀಲಿಂಗ್‌ ಮಾಡಿದ್ದ ವಿಡಿಯೋ ವೈರಲ್‌, ಆಮೇಲೆ ಆಗಿದ್ದೇನು?

ಬೆಂಕಿ ಆರಿಸುವ ಸಂದರ್ಭ ಗಣಪತಿ ಅವರಿಗೆ ಶಾಖ ತಗುಲಿ ಸಣ್ಣಪುಟ್ಟ ಗಾಯಗಾಗಿದೆ. ಗ್ರಾಮಸ್ಥರು ಬೆಂಕಿ ನಂದಿಸಲು ಸಹಕರಿಸಿದ್ದಾರೆ. ಇನ್ನು, ವಿಷಯ ತಿಳಿದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋದಂಡಪ್ಪ, ಗ್ರಾಮ ಲೆಕ್ಕಾಧಿಕಾರಿ ಸೇರಿ ಹಲವರು ಸ್ಥಳಕ್ಕೆ ಭೇಟಿ ನೀಡಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 25, 2023

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

Leave a Comment