ಶಿವಮೊಗ್ಗದ ಲೈವ್.ಕಾಂ | SAGARA NEWS | 22 ಡಿಸೆಂಬರ್ 2021
ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಾಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಇದೆ. ಅತಿಥಿ ಉಪನ್ಯಾಸಕರಿಂದಲೇ ಬಹುತೇಕ ಕಾಲೇಜುಗಳು ನಡೆಯುತ್ತಿದೆ. ಆದರೆ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿದ್ದಾರೆ. ಇದರಿಂದ ತಮ್ಮ ಕಲಿಕೆಗೆ ತೊಡಕಾಗುತ್ತಿದೆ ಎಂದು ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಬಗೆಹರಿಸಬೇಕು. ಆದರೆ ಈತನಕ ಈ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ. ಇದನ್ನು ಗಮನಿಸಿದಾಗ ಸರ್ಕಾರ ತಮ್ಮ ಶಿಕ್ಷಣದ ಹಕ್ಕು ಕಸಿಯಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಕೂಡಲೆ ಬಗೆಹರಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ವಿದ್ಯಾರ್ಥಿನಿಯರು ಎಚ್ಚರಿಸಿದರು.
ಉಪ ವಿಭಾಗಾಧಿಕಾರಿ ಕಚೇರಿವರೆಗೂ ವಿದ್ಯಾರ್ಥಿನಿಯರು ಮೆರವಣಿಗೆ ನಡೆಸಿದರು. ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿನಿಯರಾದ ಅಂಜಲಿ, ಅಮೃತಾ, ಪಲ್ಲವಿ, ರಂಜಿತಾ, ಚಿತ್ರಾ, ಶಾಂತಲಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200