ಶಿವಮೊಗ್ಗ ಲೈವ್.ಕಾಂ | SAGARA NEWS | 18 ಅಕ್ಟೋಬರ್ 2020
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಾಗರ ಪಟ್ಟಣದ ಮೀನು ಮಾರುಕಟ್ಟೆ ಬಳಿ ದಾಳಿ ನಡೆಸಿ, ಐವರನ್ನು ಬಂಧಿಸಲಾಗಿದೆ.
ಬಂಧಿತರಿಂದ 25,500 ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಮೀರು ಮಾರುಕಟ್ಟೆಯ ನೀರಿನ ಟ್ಯಾಂಕ್ ಸಮೀಪ ಇವರು ಬೆಟ್ಟಿಂಗ್‍ನಲ್ಲಿ ತೊಡಗಿರುವುದು ತಿಳಿದು ಬಂದಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.
ಸಾಗರ ಡಿವೈಎಸ್‍ಪಿ ವಿನಾಯಕ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಅಶೋಕ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]