ಶಿವಮೊಗ್ಗ: ಗಾಂಜಾ ಸಹಿತ ಪೊಲೀಸರಿಗೆ ಸಿಕ್ಕಿಬಿದಿದ್ದವರಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ನಾಯಕ ಮೂರು ವರ್ಷ ಕಠಿಣ ಕಾರಾವಾಸ ಶಿಕ್ಷೆ (Jail) ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಾಗರ ನಿವಾಸಿಗಳಾದ ಇಮ್ರಾನ್ ಖಾನ್ (25), ಇಮ್ಮಿಯಾಜ್ (28) ಎಂಬುವವರಿಗೆ ತಲಾ ಮೂರು ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ತಲಾ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
ಸಾಗರದ ಬಿ.ಹೆಚ್.ರಸ್ತೆಯ ಸದ್ಗುರು ಲೇಔಟ್ ಸಮೀಪ ಗಾಂಜಾ ಮಾರಾಟ ವೇಳೆ ಸಾಗರ ಟೌನ್ ಪೊಲೀಸರು 2021ರ ಆಗಸ್ಟ್ 4ರಂದು ದಾಳಿ ನಡೆಸಿ 1 ಕೆ.ಜಿ 60 ಗ್ರಾಂ ಒಣ ಗಾಂಜಾ ಮತ್ತು 800 ರೂ. ನಗದು ಮತ್ತು ಗಾಂಜಾ ಮಾರಾಟ ಮಾಡಲು ಬಳಸಿದ ಮಾರುತಿ ಓಮ್ಮಿ ವ್ಯಾನ್ ವಶಕ್ಕೆ ಪಡೆದಿದ್ದರು. ಇವರ ವಿರುದ್ದ ಎನ್‌ಡಿಪಿಎಸ್ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು.
ಆಗಿನ ತನಿಖಾಧಿಕಾರಿ ಪಿಎಸ್‌ಐ ಸಾಗರ್‌ಕರ್ ಅವರು ಪ್ರಕರಣದ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಾ ದೃಢಪಟ್ಟ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ಶಿಕ್ಷೆ ನೀಡಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಎ.ಎಂ. ಸುರೇಶ್ ಕುಮಾರ್ ವಾದ ಮಂಡಿಸಿದ್ದರು.
ಇದನ್ನೂ ಓದಿ » ಕಾರ್ಗಲ್ ಪವರ್ ಚಾನಲ್ ಬಳಿ ನಾಪತ್ತೆಯಾಗಿದ್ದ ವ್ಯಕ್ತಿ, ತಳಕಳಲೆ ಡ್ಯಾಂ ಹಿನ್ನೀರಿನಲ್ಲಿ ಶವವಾಗಿ ಪತ್ತೆ
Jail
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






