ಸಾಗರದ ಇಬ್ಬರು ಯುವಕರಿಗೆ ಮೂರು ವರ್ಷ ಜೈಲು ಶಿಕ್ಷೆ, ₹25,000 ದಂಡ, ಯಾಕೆ?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಗಾಂಜಾ ಸಹಿತ ಪೊಲೀಸರಿಗೆ ಸಿಕ್ಕಿಬಿದಿದ್ದವರಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ನಾಯಕ ಮೂರು ವರ್ಷ ಕಠಿಣ ಕಾರಾವಾಸ ಶಿಕ್ಷೆ (Jail) ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸಾಗರ ನಿವಾಸಿಗಳಾದ ಇಮ್ರಾನ್ ಖಾನ್ (25), ಇಮ್ಮಿಯಾಜ್ (28) ಎಂಬುವವರಿಗೆ ತಲಾ ಮೂರು ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ತಲಾ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಸಾಗರದ ಬಿ.ಹೆಚ್‌.ರಸ್ತೆಯ ಸದ್ಗುರು ಲೇಔಟ್ ಸಮೀಪ ಗಾಂಜಾ ಮಾರಾಟ ವೇಳೆ ಸಾಗರ ಟೌನ್ ಪೊಲೀಸರು 2021ರ ಆಗಸ್ಟ್ 4ರಂದು ದಾಳಿ ನಡೆಸಿ 1 ಕೆ.ಜಿ 60 ಗ್ರಾಂ ಒಣ ಗಾಂಜಾ ಮತ್ತು 800 ರೂ. ನಗದು ಮತ್ತು ಗಾಂಜಾ ಮಾರಾಟ ಮಾಡಲು ಬಳಸಿದ ಮಾರುತಿ ಓಮ್ಮಿ ವ್ಯಾನ್ ವಶಕ್ಕೆ ಪಡೆದಿದ್ದರು. ಇವರ ವಿರುದ್ದ ಎನ್‌ಡಿಪಿಎಸ್ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು.

ಆಗಿನ ತನಿಖಾಧಿಕಾರಿ ಪಿಎಸ್‌ಐ ಸಾಗರ್‌ಕ‌ರ್ ಅವರು ಪ್ರಕರಣದ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಾ ದೃಢಪಟ್ಟ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ಶಿಕ್ಷೆ ನೀಡಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಎ.ಎಂ. ಸುರೇಶ್ ಕುಮಾರ್ ವಾದ ಮಂಡಿಸಿದ್ದರು.

ಇದನ್ನೂ ಓದಿ » ಕಾರ್ಗಲ್‌ ಪವರ್‌ ಚಾನಲ್‌ ಬಳಿ ನಾಪತ್ತೆಯಾಗಿದ್ದ ವ್ಯಕ್ತಿ, ತಳಕಳಲೆ ಡ್ಯಾಂ ಹಿನ್ನೀರಿನಲ್ಲಿ ಶವವಾಗಿ ಪತ್ತೆ

Jail

Leave a Comment