ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | JOG NEWS | 18 ಜುಲೈ 2021
ಜೋರು ಮಳೆಯ ನಡುವೆಯು ಶಿವಮೊಗ್ಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಜಲಪಾತ ಕಣ್ತುಂಬಿಕೊಳ್ಳಲು ಸಾಧ್ಯವಾಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ.
ಕಳೆದ ರಾತ್ರಿಯಿಂದ ಸಾಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಜೋಗ ಸುತ್ತಮುತ್ತಲು ಕೂಡ ನಿರಂತರ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಹಾಗಾಗಿ ಜಲಪಾತ ಕಣ್ತುಂಬಿಕೊಳ್ಳುವುದು ಅಸಾಧ್ಯವಾಗಿದೆ.
ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಧುಮ್ಮಿಕ್ಕುವ ಸದ್ದು ಕೇಳುತ್ತಿದೆ. ಆದರೆ ಜಲಪಾತವನ್ನು ಕಣ್ತುಂಬಿಕೊಳ್ಳಲು ಅಸಾಧ್ಯವಾಗಿದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ರಾತ್ರಿಯಿಂದ ಬಿಡುವು ಕೊಡದೆ ಸುರಿಯುತ್ತಿದೆ ಮಳೆ
ಭಾನುವಾರ ಆಗಿರುವುದರಿಂದ ದೂರದ ಊರುಗಳಿಂದ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡಿದ್ದಾರೆ. ಆದರೆ ಜಲಪಾತ ಕಾಣಸಿಗದೆ ನಿರಾಸೆಯಿಂದ ಹಿಂತಿರುಗುತ್ತಿದ್ದಾರೆ. ಫೋಟೊ, ಸೆಲ್ಫಿಗೆ ಅವಕಾಶ ಸಿಗದೆ ಬೇಸರದಿಂದಲೆ ಮರಳುತ್ತಿದ್ದಾರೆ.

ಮಳೆ ಆರಂಭವಾಗುತ್ತಿದ್ದಂತೆ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕೋವಿಡ್ ಕಾರಣದಿಂದಾಗಿ ಕೆಲವು ದಿನ ಜಲಪಾತ ವೀಕ್ಷಣೆಗೆ ಸರ್ಕಾರ ನಿರ್ಬಂಧ ವಿಧಿಸಿತ್ತು. ಆದರೆ ಈಗ ನಿರ್ಬಂಧ ತೆರವಾದ ಬಳಿಕ ಪ್ರತಿ ವೀಕೆಂಡ್‍ನಲ್ಲಿ ಸಾವಿರಾರು ಜನರು ಜೋಗ ಜಲಪಾತಕ್ಕೆ ಭೇಟಿ ನೀಡುತ್ತಿದ್ದಾರೆ.
ಇದನ್ನೂ ಓದಿ | ಚೇತರಿಕೆಯತ್ತ ಶಿವಮೊಗ್ಗ ಪ್ರವಾಸೋದ್ಯಮ, ಜೋಗ, ಕುಪ್ಪಳಿಗೆ ಮೊದಲ ದಿನ ಭೇಟಿ ಕೊಟ್ಟವರೆಷ್ಟು?
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






