ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಮತ್ತೆ ಜೀವ ಕಳೆ, ಮೊದಲ ದಿನ ಹೇಗಿತ್ತು ಗೊತ್ತಾ ರೆಸ್ಪಾನ್ಸ್?

ಶಿವಮೊಗ್ಗ ಲೈವ್.ಕಾಂ | SAGARA NEWS | 28 JUNE 2021

ಕರೋನ ಲಾಕ್​ ಡೌನ್​ನಿಂದಾಗಿ ಬಂದ್ ಆಗಿದ್ದ ಜೋಗ ಜಲಪಾತಕ್ಕೆ ಇವತ್ತಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೆ ನೂರಾರು ಪ್ರವಾಸಿರು ಜಲಪಾತದ ರಮಣೀಯತೆಯನ್ನು ಕಣ್ತುಂಬಿಕೊಂಡರು.

ಕಳೆದ ಎರಡು ತಿಂಗಳಿಂದ ಜೋಗ ಜಲಪಾತ ವೀಕ್ಷಣೆಯನ್ನು ಬಂದ್ ಮಾಡಲಾಗಿತ್ತು. ಜಲಪಾತದ ವಿವ್ ಪಾಯಿಂಟ್​ ಕಡೆಯ ಗೇಟ್​ಗೆ ಬೀಗ ಹಾಕಲಾಗಿತ್ತು. ಸರ್ಕಾರ ಪ್ರವಾಸಿ ತಾಣಗಳಿಗೆ ಅವಕಾಶ ನೀಡಿದ ಬೆನ್ನಿಗೆ ಜೋಗ ಜಲಪಾತದ ವೀಕ್ಷಣೆಗೂ ಅವಕಾಶ ನೀಡಲಾಗಿದೆ.

ಮೊದಲ ದಿನವೆ ಉತ್ತಮ ರೆಸ್ಪಾನ್ಸ್​

ಮಳೆಗಾಲ ಆದ್ದರಿಂದ ಜೋಗದ ರಾಜ, ರಾಣಿ, ರೋರರ್, ರಾಕೆಟ್​ ಜಲಪಾತಗಳು ಮೈದುಂಬಿಕೊಂಡಿವೆ. ನೀರು ಧುಮ್ಮಿಕ್ಕುವ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇವತ್ತು ದೊಡ್ಡ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ಆರಂಭದಲ್ಲೇ ಸುಮಾರು ನೂರು ಪ್ರವಾಸಿಗರು ಜೋಗ ವೀಕ್ಷಿಸಿ, ಕಣ್ತುಂಬಿಕೊಂಡರು.

ಕೋವಿಡ್ ನಿಯಮ ಕಡ್ಡಾಯ ಪಾಲನೆ

ಜೋಗ ಜಲಪಾತ ಕಣ್ತುಂಬಿಕೊಳ್ಳಲು ಮಳೆಗಾಲದಲ್ಲಿ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಆದರೆ ಈಗ ಕೋವಿಡ್​ ಇರುವುದರಿಂದ ಸರ್ಕಾರ ವಿಧಿಸಿರುವ ಕೆಲವು ಕಠಿಣ ನಿಯಮಗಳನ್ನು ಪಾಲಿಸಬೇಕಿದೆ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಆಗಾಗ ಸೂಚನೆಯನ್ನು ನೀಡಲಾಗುತ್ತಿದೆ.

ಪ್ರತಿ ದಿನ ಜೋಗದಲ್ಲಿ ಜಲಪಾತ ವೀಕ್ಷಣೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರು ಆಗಮಿಸುತ್ತಿರುವುದರಿಂದ ಜೋಗದಲ್ಲಿ ಮತ್ತೆ ಚಟುವಟಿಕೆಗೆ ಗರಿಗೆದರಿದೆ. ಫೋಟೊಗ್ರಾಫರ್​ಗಳಿಗೆ ಬಿಸ್ನೆಸ್​, ಸುತ್ತಮುತ್ತಲ ಅಂಗಡಿಗಳಲ್ಲಿ ವ್ಯಾಪಾರ ಪುನಾರಂಭವಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

180621 Jog Falls Sagara 2021 1

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment